ಬ್ರಹ್ಮಾವರದಲ್ಲಿ ನ.27- 29 ‘ಉಡುಪಿ ಆಹಾರ ಬಿಸಿನೆಸ್ ಎಕ್ಸ್‌ಪೋ-2026: ಇಲ್ಲಿ ಏನೇನು ವಿಶೇಷವಿದೆ?

ಬ್ರಹ್ಮಾವರ: ಆಹಾರ ಉದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಸ್ಥಳೀಯ ಉದ್ಯಮಿಗಳಿಗೆ ಹೊಸ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಆಹಾರ ಬಿಸಿನೆಸ್ ಎಕ್ಸ್‌ಪೋ-2026’ ಅನ್ನು ನವೆಂಬರ್ 27ರಿಂದ 29ರವರೆಗೆ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘ (ರಿ.), ಬ್ರಹ್ಮಾವರ ಇದರ ವತಿಯಿಂದ ನಡೆಯುವ ಈ ಮೂರು ದಿನಗಳ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳನ್ನು ತೆರೆಯುವ ನಿರೀಕ್ಷೆಯಿದೆ. ಬಿ2ಬಿ (B2B) ಮತ್ತು ಬಿ2ಸಿ (B2C) ಮಾದರಿಯಲ್ಲಿ […]

ನ.15ರೊಳಗೆ ಜಿಲ್ಲಾಸ್ಪತ್ರೆ ಲೋಕಾರ್ಪಣೆ ದಿನಾಂಕ ಘೋಷಿಸಿ: ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ

ಉಡುಪಿ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವರು ನ.15ರೊಳಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಲೋಕಾರ್ಪಣೆಯ ದಿನಾಂಕ ಘೋಷಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳಾದರೂ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಸುಸಜ್ಜಿತ ಜಿಲ್ಲಾಸ್ಪತ್ರೆ ಇನ್ನೂ ಪೂರ್ಣ […]

ನಂದಿನಿ ಹಾಲಿನ ದರ ಏರಿಕೆ ಬಿಸಿ: ಹೋಟೆಲ್, ಟೀ, ಕಾಫಿ, ತಿಂಡಿ-ತಿನಿಸುಗಳ ಬೆಲೆಯೂ ಏರಿಕೆ!

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಬಿಸಿ ಇದೀಗ ಹೋಟೆಲ್ ಗ್ರಾಹಕರಿಗೂ ತಟ್ಟುವ ಸಾಧ್ಯತೆಯಿದೆ. ಹಾಲಿನ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಟೀ, ಕಾಫಿ ಸೇರಿದಂತೆ ಹಾಲಿನಿಂದ ತಯಾರಿಸುವ ವಿವಿಧ ತಿಂಡಿ-ತಿನಿಸುಗಳ ದರ ಏರಿಸಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಿರುವುದರಿಂದ ಹೋಟೆಲ್ ಉದ್ಯಮದ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ. ಈಗಾಗಲೇ ಅಕ್ಕಿ, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿರುವ ಹೋಟೆಲ್ […]

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಮಣಿಪಾಲ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ (ಮಾಹೆ) ಘಟಕವಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ), ಮಣಿಪಾಲದ ಬೋಧನಾ ಆಸ್ಪತ್ರೆಯಾದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (Federation of Indian Chambers of Commerce and Industry – ಫಿಕ್ಕಿ) ನೀಡುವ 18ನೇ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026ರಲ್ಲಿ ‘ಸಮುದಾಯ ಸಹಭಾಗಿತ್ವದಲ್ಲಿ ಶ್ರೇಷ್ಠತೆ’ (Excellence in Community Engagement) ವಿಭಾಗದ ಪ್ರಶಸ್ತಿ ಲಭಿಸಿದೆ. ಆಸ್ಪತ್ರೆಯ ಲಾಭರಹಿತ ಉಪಕ್ರಮ ಹಾಗೂ ಉಡುಪಿ-ಮಣಿಪಾಲ […]

ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್

ಉಡುಪಿ: ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆದಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್. ನವೀನ್ ವಾಗ್ದಾಳಿ ನಡೆಸಿದರು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಕಾಂಗ್ರೆಸ್ ಸರ್ಕಾರದ ಸಚಿವರೇ ಒಪ್ಪಿಕೊಂಡಿದ್ದಾರೆ. […]