ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ: ಅಕ್ಟೋಬರ್ 31 ರಂದು ಶಿರ್ವ ಶಾಖೆ ಉದ್ಘಾಟನೆ

ಶಿರ್ವ: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಪ್ರಧಾನ ಶಾಖೆ ಮತ್ತು ಪ್ರಥಮ ಶಾಖೆ ಹೊಂದಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಇದರ ದ್ವಿತೀಯ ಶಾಖೆಯು, ಅಕ್ಟೋಬರ್ 31 ರಂದು ಶಿರ್ವ ಗ್ರಾಮ ಪಂಚಾಯತ್ ಕಚೇರಿಯ ಬಳಿ ಬೆಹರೈನ್ ಟವರ್ ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮ ಗುರು ವಂ. ಫಾ. ಚಾರ್ಲ್ಸ್ ಮಿನೇಜಸ್ ಆಶೀರ್ವಚನ ನೆರವೇರಿಸಲಿದ್ದಾರೆ. ವಿಧಾನ […]
ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ; ₹42.97 ಲಕ್ಷ ವಸೂಲಿ ಆರೋಪ: ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ, ಹಂತ ಹಂತವಾಗಿ ₹42.97 ಲಕ್ಷ ಹಣ ಪಡೆದು ಹಿಂದಿರುಗಿಸದೆ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೈಂದೂರು ತಾಲೂಕಿನ ಯಡ್ತರೆ ಮಯ್ಯಾಡಿ ಮೂಲದ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ನಾಗರತ್ನ ಎಚ್. (42) ಹಾಗೂ ಕಾರ್ಕಳ ತಾಲೂಕಿನ ಮಿಯಾರು ಮೂಲದ ಬೆಂಗಳೂರಿನ ಮೆಜೆಸ್ಟಿಕ್ ನಿವಾಸಿ ಹೇಮಂತ್ (41) ಎಂದು ಗುರುತಿಸಲಾಗಿದೆ. ಉಡುಪಿಯ ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ […]
ಧರ್ಮಸ್ಥಳ ಸೌಜನ್ಯ ಪ್ರಕರಣ: ಎಸ್ಐಟಿ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್, ಸರ್ಕಾರದಿಂದ ಆದೇಶ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೂತನ ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಎಸ್ಐಟಿ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಎಸ್ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಕೈಬಿಡುವಂತೆ ಐಜಿಪಿ ಶಶಿಕುಮಾರ್ ಮತ್ತು ವೆಂಕಟೇಶ್ ಪ್ರಸನ್ನ ಅವರು […]
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಚುರುಕು: ಹಲವು ಪೊಲೀಸ್ ಸಿಬ್ಬಂದಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ ಎಸ್ಐಟಿ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಅಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಕೆಳಹಂತದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಿದೆ. ಈಗಾಗಲೇ ಅಂದಿನ ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಎಸ್ಐಟಿ, ಇದೀಗ ಸಬ್ಇನ್ಸ್ಪೆಕ್ಟರ್ (ಎಸ್ಐ), ಸಹಾಯಕ ಸಬ್ಇನ್ಸ್ಪೆಕ್ಟರ್ (ಎಎಸ್ಐ), ಪೊಲೀಸ್ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಹಾಗೂ ರೈಟರ್ಗಳಿಗೆ ನೋಟಿಸ್ ನೀಡಿದೆ. ಸುಮಾರು ಎಂಟು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಕರೆಸಲಾಗಿದ್ದು, ಇಂದು ವಿಚಾರಣೆ ನಡೆಯಲಿದೆ. ಪ್ರಕರಣದ […]
ರಾಜ್ಯದಲ್ಲಿ ಇನ್ನು 3 ವರ್ಷ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ ಅನುಮತಿ ಇಲ್ಲ!ಖಾಸಗಿ ಕಾಲೇಜು ಆರಂಭಿಸಬಯಸುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ಶೈಕ್ಷಣಿಕ ವರ್ಷಗಳವರೆಗೆ ಹೊಸ ಖಾಸಗಿ ಪದವಿಪೂರ್ವ (ಪಿಯು) ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2027–28ರಿಂದ 2029–30ನೇ ಶೈಕ್ಷಣಿಕ ವರ್ಷದವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.ಇತ್ತೀಚೆಗೆ ಖಾಸಗಿ ಪಿಯು ಕಾಲೇಜುಗಳ ಹಾವಳಿ ಜಾಸ್ತಿಯಾಗಿದೆ. ವಿದ್ಯಾರ್ಥಿಗಳಿಂದ ಲಕ್ಷಗಟ್ಟಲೇ ಫೀಸ್ ಪೀಕುವ ಕಾಲೇಜುಗಳು ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಕಾಲೇಜುಗಳಿಗೆ ಅನುಮತಿ ನೀಡದೇ ಇರುವುದು ಒಳ್ಳೆಯ ನಿರ್ಧಾರ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕರಡು […]