ಸೌಜನ್ಯ ಪ್ರಕರಣದ ಮರುತನಿಖೆ ಚುರುಕು: ಮೃತದೇಹ ಪತ್ತೆಯಾದ ಸ್ಥಳದಲ್ಲಿ ಎಸ್‌ಐಟಿಯಿಂದ ಮರುಸೃಷ್ಟಿ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಧರ್ಮಸ್ಥಳದ ಕಾಡಿಗೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದ್ದಾರೆ. ಸುಮಾರು 14 ವರ್ಷಗಳ ಹಿಂದೆ ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳದ ಮಣ್ಣಸಂಕದ ಕಾಡಿನ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಎಸ್‌ಐಟಿ ತಂಡ, ಅಂದಿನ ಘಟನೆಯ ವಿವರಗಳನ್ನು ಆಧರಿಸಿ ಸ್ಥಳದಲ್ಲೇ ಮರುಸೃಷ್ಟಿ ಪ್ರಕ್ರಿಯೆ ನಡೆಸಿತು. ಎಸ್‌ಐಟಿ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಮೃತದೇಹ […]

ಹಾಲು ಮತ್ತು ಮೊಸರಿನ ದರದಲ್ಲಿ ಭಾರೀ ಹೆಚ್ಚಳ: ಜನಸಾಮಾನ್ಯರಿಂದ ಆಕ್ರೋಶ

ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ಗ್ರಾಹಕರಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮತ್ತೊಂದು ಶಾಕ್ ನೀಡಿದೆ. ನವೆಂಬರ್ 1ರಿಂದ ಹಾಲು ಮತ್ತು ಮೊಸರಿನ ದರದಲ್ಲಿ ಹೆಚ್ಚಳವಾಗಲಿದ್ದು, ಇದು ಮಧ್ಯಮ ವರ್ಗದ ಕುಟುಂಬಗಳ ತಿಂಗಳ ಬಜೆಟ್ ಮೇಲೆ ಮತ್ತಷ್ಟು ಹೊರೆ ಉಂಟುಮಾಡಲಿದೆ. ಹೊಸ ದರದ ಪ್ರಕಾರ ಲೀಟರ್ ಹಾಲಿನ ಬೆಲೆಯಲ್ಲಿ 8 ರೂ. ಹಾಗೂ ಅರ್ಧ ಕೆ.ಜಿ. ಮೊಸರಿನ ಬೆಲೆಯಲ್ಲಿ 14 ರೂ. ಹೆಚ್ಚಳವಾಗಲಿದೆ ಹಾಲಿನ ದರ ಏರಿಕೆಯನ್ನು ಹೇಗೋ ಒಪ್ಪಿಕೊಳ್ಳಬಹುದು. ಆದರೆ ಮೊಸರಿನ ಬೆಲೆಯನ್ನು ಇಷ್ಟೊಂದು […]

Indian Railway: ಬೆಂಗಳೂರಿನಿಂದ ಕಾರವಾರ ಮಾರ್ಗವಾಗಿ ಗೋವಾಕ್ಕೆ ವಂದೇ ಭಾರತ್ ಪ್ರಯಾಣ; ನವೆಂಬರ್‌ ಅಲ್ಲಿ ಚಾಲನೆ

ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಯಶವಂತಪುರದವರೆಗೆ ವಿಸ್ತರಿಸಲಾಗಿದೆ. ನವೆಂಬರ್ ಮೂರನೇ ವಾರದಲ್ಲಿ ಮಂಗಳೂರಿಗೆ ಭೇಟಿ ನೀಡಿ ರೈಲಿಗೆ ಚಾಲನೆ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಭರವಸೆ ನೀಡಿದ್ದಾರೆ. ಕೊಂಕಣ ರೈಲ್ವೆ ವಿಲೀನದ ಬೇಡಿಕೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಮಂಗಳೂರು: ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ದೊರೆತಿದೆ. ಮಂಗಳೂರು–ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಯಶವಂತಪುರದವರೆಗೆ ವಿಸ್ತರಿಸಲಾಗಿದ್ದು, ನವೆಂಬರ್ ಮೂರನೇ […]

ಭಾರತಕ್ಕೆ ಸ್ವಂತ GPS ಬಲ: ದೇಶೀಯ ನ್ಯಾವಿಗೇಷನ್ ವ್ಯವಸ್ಥೆ ಬಲಪಡಿಸಲು ಇಸ್ರೋದಿಂದ NVS-03 ಉಡಾವಣೆ

ಅಮರಾವತಿ: ಸ್ವದೇಶಿ ಜಿಪಿಎಸ್ ವ್ಯವಸ್ಥೆಯನ್ನು ಬಲಪಡಿಸಲು ಇಸ್ರೋ ಮುಂದಿನ ಪೀಳಿಗೆಯ ಉಪಗ್ರಹ ಉಡಾವಣೆ ಮಾಡಿದೆ. ಶುಕ್ರವಾರ ರಾತ್ರಿ 11:51ಕ್ಕೆ ಶ್ರೀಹರಿಕೋಟದಿಂದ ಇಸ್ರೋದ (ISRO) ‘ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್’ (GSLV-F18) ನಭಕ್ಕೆ ಚಿಮ್ಮಿತು. ಇದು ‘NVS-03’ ಎಂಬ ನಿರ್ಣಾಯಕ ನ್ಯಾವಿಗೇಷನ್ ಉಪಗ್ರಹವನ್ನು ಹೊತ್ತೊಯ್ಯಿತು. ಈ ಉಪಗ್ರಹವು ಭಾರತದ ಸ್ವದೇಶಿ ನ್ಯಾವಿಗೇಷನ್ ವ್ಯವಸ್ಥೆಯಾದ ‘NavIC’ ಅನ್ನು ಪುನಃಸ್ಥಾಪಿಸಲು ಮತ್ತು ಬಲಪಡಿಸಲು ನೆರವಾಗಲಿದೆ. ಈ ಯಶಸ್ವಿ ಕಾರ್ಯಾಚರಣೆಯು ಕೇವಲ ಮತ್ತೊಂದು ಉಪಗ್ರಹ ಉಡಾವಣೆಗಿಂತ ಹೆಚ್ಚಿನ ಮಹತ್ವದ್ದಾಗಿತ್ತು. ಇದು ಭಾರತದ ಕಾರ್ಯತಂತ್ರದ […]

ಮಂಡ್ಯಕ್ಕೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಭೇಟಿ – 1,793 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಮಂಡ್ಯ: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್‌ (D.K Shivakumar) ಅವರು ಇಂದು (ಅ.31) ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಂಡ್ಯ (Mandya) ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗಲಿರುವ ಸಮಾರಂಭದಲ್ಲಿ ಒಟ್ಟು 1,793 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಯವರ ಅಧಿಕೃತ ಪ್ರವಾಸದ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಗಣ್ಯರ ಅನುಕೂಲಕ್ಕಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಗೂ […]