ತಮಿಳುನಾಡು ಜೈಲಿನಿಂದ ಖೈದಿಗಳು ಎಸ್ಕೇಪ್ ಪ್ರಕರಣ – ಹಿರಿಯ ಜೈಲಾಧಿಕಾರಿ ಅಮಾನತು, ಸಿಬ್ಬಂದಿ ವರ್ಗಾವಣೆಗೆ ಸಿಎಂ ವಿಜಯ್ ಆದೇಶ

ಚೆನ್ನೈ: ತಮಿಳುನಾಡಿನ ಥೇಣಿ (Theni) ಜಿಲ್ಲೆಯ ಉಪಜೈಲಿನಿಂದ 17 ಖೈದಿಗಳು ಪರಾರಿಯಾದ ಪ್ರಕರಣಕ್ಕೆ (Tamil Nadu Jail Break) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ (CM Vijay) ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಮತ್ತು ಭದ್ರತಾ ಲೋಪದ ಆರೋಪದ ಹಿನ್ನೆಲೆಯಲ್ಲಿ ಉಪಜೈಲಿನ ಪ್ರಭಾರ ಉಪ ಅಧೀಕ್ಷಕರನ್ನು ಅಮಾನತುಗೊಳಿಸುವಂತೆ ವಿಜಯ್ ಆದೇಶಿಸಿದ್ದಾರೆ. ಇದರ ಜೊತೆಗೆ ಜೈಲು ಇಲಾಖೆಯ ಹಿರಿಯ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಆದೇಶಿಸಿದೆ. ಅಕ್ಟೋಬರ್ 26ರಂದು ಥೇಣಿ ಜಿಲ್ಲೆಯ ಉಪಜೈಲಿನಲ್ಲಿ ಈ ಘಟನೆ ನಡೆದಿತ್ತು. ವೈದ್ಯಕೀಯ […]
ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸಮಾಜ ಸೇವಾ ಕ್ಷೇತ್ರದಲ್ಲಿ ಆದರ್ಶ ಚಾರಿಟೇಬಲ್ ಟ್ರಸ್ಟ್ನ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಅವರ ಹೆಸರಿನ ಎದುರು ಉಡುಪಿ ಜಿಲ್ಲೆಯ ಬದಲು ಉತ್ತರ ಕನ್ನಡ ಎಂದು […]
ಉಡುಪಿಯ ವಿಂಡೋರ್ಸ್ ಸೊಲ್ಯೂಷನ್ಸ್ & ಬಿಲ್ಡಿಂಟಚ್ ನಲ್ಲಿ ಉದ್ಯೋಗಾವಕಾಶ

ಉಡುಪಿಯ ವಿಂಡೋರ್ಸ್ ಸೊಲ್ಯೂಷನ್ಸ್ & ಬಿಲ್ಡಿಂಟಚ್ ನಲ್ಲಿ ಉದ್ಯೋಗಾವಕಾಶ ನಡೆಯುತಿದು ಆಸಕ್ತರು ಕೂಡಲೇ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9342231885
ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ ‘ನವೋನ್ಮೇಶ 2026’ ರಾಜ್ಯ ಮಟ್ಟದ ಫೆಸ್ಟ್ ಉದ್ಘಾಟನೆ

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ನವೋನ್ಮೇಶ’ ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಉದ್ಘಾಟನಾ ಸಮಾರಂಭವು ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಮಾಜಿ ಸಹಾಯಕ ಆಯುಕ್ತರಾಗಿದ್ದ ಶ್ರೀಮತಿ ರಶ್ಮಿ ಎಸ್. ಆರ್. KAS ಭಾಗವಹಿಸಿ ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ […]
ಉಡುಪಿ: ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು

ಉಡುಪಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಈ ಬಾರಿ ನಿರಾಸೆ ಎದುರಾಗಿದೆ. ಪ್ರತಿವರ್ಷ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ನೀಡಲಾಗುತ್ತಿದ್ದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ಬಾರಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಕ್ಷಗಾನ, ಕಲೆ, ಸಾಹಿತ್ಯ, ಕ್ರೀಡೆ, ಕಂಬಳ, ಕೃಷಿ, ಸಮಾಜಸೇವೆ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ವಿವಿಧ ವಲಯಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಗೌರವಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು […]