ಡಿಜಿಟಲ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ ಗಳ ನಿರ್ಲಕ್ಷ್ಯ ಸಾಬೀತಾದ್ರೆ ಗ್ರಾಹಕರಿಗೆ ಪರಿಹಾರ ನೀಡಲೇಬೇಕು: ಸುಪ್ರೀಂ ಕೋರ್ಟ್

ನವದೆಹಲಿ : ಡಿಜಿಟಲ್ ಅರೆಸ್ಟ್ ಸೇರಿದಂತೆ ಆನ್‌ಲೈನ್ ಹಣಕಾಸು ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್‌ಗಳ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಸಾಬೀತಾದರೆ, ಸಂತ್ರಸ್ತರು ಕಳೆದುಕೊಂಡ ಹಣವನ್ನು ಬ್ಯಾಂಕ್‌ಗಳೇ ಪರಿಹಾರವಾಗಿ ನೀಡಬೇಕಾಗಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಗ್ರಾಹಕರನ್ನು ಡಿಜಿಟಲ್ ವಂಚನೆಗಳಿಂದ ರಕ್ಷಿಸುವುದು ಬ್ಯಾಂಕ್‌ಗಳ ಮೂಲಭೂತ ಜವಾಬ್ದಾರಿಯಾಗಿದೆ. ಬ್ಯಾಂಕ್‌ಗಳು ಅಗತ್ಯ ಮುನ್ನೆಚ್ಚರಿಕೆ ವಹಿಸದೆ ಅಥವಾ ಅನುಮಾನಾಸ್ಪದ ವಹಿವಾಟುಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾದರೆ, ಅದರ ಹೊಣೆಯನ್ನು ಅವುಗಳೇ ಹೊರಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಗಳಿಗೆ ಸಂಬಂಧಿಸಿದ […]

ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಘಟಿಕೋತ್ಸವದ ಸಂಭ್ರಮ: ಆಯುರ್ವೇದದ ಮೂಲಕ ಜೀವನಶೈಲಿ ಸುಧಾರಣೆಗೆ ವಿಫುಲ ಅವಕಾಶ: ಡಾ. ಮೋಹನ ಆಳ್ವ

ಉಡುಪಿ: ಆಧುನಿಕ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಆಯುರ್ವೇದ ಮಹತ್ವದ ಪಾತ್ರ ವಹಿಸಬಲ್ಲದು. ಹೀಗಾಗಿ ಹರ್ಬಲ್ ಹಾಗೂ ರಾಸಾಯನಿಕ ಮುಕ್ತ ಸೌಂದರ್ಯವರ್ಧಕ ಉತ್ಪನ್ನಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಯುರ್ವೇದದ ಸಾಮರ್ಥ್ಯ ಮತ್ತು ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಇದು ಸೂಕ್ತ ಸಮಯ. ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಮಾನವೀಯತೆ, ಕರುಣೆ ಹಾಗೂ ಸೇವಾ ಮನೋಭಾವದೊಂದಿಗೆ ಸಮಾಜಕ್ಕೆ ಕೊಡುಗೆ ನೀಡುವ ಜವಾಬ್ದಾರಿಯನ್ನು ವೈದ್ಯರು ಅರಿತುಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. […]

ಉಡುಪಿ: ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತ ಆತ್ಮಹತ್ಯೆಗೆ ಶರಣು!

ಉಡುಪಿ: ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ನಾಯರ್‌ಕೊಡಿ ಘಟಕದ ಕಾರ್ಯಕರ್ತ ಪ್ರದೀಪ್‌ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್‌ ಪೂಜಾರಿ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ […]

ಅಲೆಮಾರಿ ಸಮುದಾಯದವರಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

ಉಡುಪಿ: ಪ.ಜಾತಿ/ ಪ.ಪಂಗಡ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಗಾಗಿ ಅನುಷ್ಠಾನ ಮಾಡಲಾಗಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ ವಿಳಾಸ https://sevasindhu.karnataka.gov.in/ ಮೂಲಕ ಗ್ರಾಮಒನ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. […]

ಕುಂದಾಪುರ: ಬಾಲಕಿ ಆತ್ಮಹತ್ಯೆ

ಕುಂದಾಪುರ: ಶಾಲೆಯ ಮಧ್ಯ ವಾರ್ಷಿಕ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದ ವಿಚಾರ ಹಾಗೂ ಪೋಷಕರ ಸಭೆಗೆ ತಾಯಿ ಹಾಜರಾಗದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸ್ರೂರು ಗ್ರಾಮದಲ್ಲಿ ಅ.30ರ ಬೆಳಗ್ಗೆ ನಡೆದಿದೆ. ಬಸ್ರೂರು ಗ್ರಾಮದ ಫಾತಿಮಾ ಅಕ್ಸಾ (15) ಮೃತಪಟ್ಟ ಬಾಲಕಿ. ಈಕೆ ಬಸ್ರೂರು ಸರಕಾರಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮಧ್ಯ ವಾರ್ಷಿಕ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣ ಳಾಗಿದ್ದಳು. ಅ.30ರಂದು ಶಾಲೆಯಲ್ಲಿ ಪೋಷಕರ ಸಭೆ ನಿಗದಿಯಾಗಿತ್ತು. ಆದರೆ, ಬಾಲಕಿಯ […]