ಪ್ರಶಸ್ತಿ ಆಯ್ಕೆಗೆ ಒತ್ತಡ ಸಲ್ಲದು; ರಾಜ್ಯಾದ್ಯಂತ ಏಕರೂಪದ ನೀತಿ ಅಗತ್ಯ: ರಿಜ್ವಾನ್ ಅರ್ಷದ್

ಉಡುಪಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯು ರಾಜಕೀಯ ಅಥವಾ ಯಾವುದೇ ರೀತಿಯ ಒತ್ತಡದ ಆಧಾರದಲ್ಲಿ ನಡೆಯಬಾರದು. ಪ್ರಶಸ್ತಿಗೆ ತನ್ನದೇ ಆದ ಗೌರವವಿದ್ದು, ರಾಜ್ಯದಾದ್ಯಂತ ಏಕರೂಪದ ನೀತಿ ಹಾಗೂ ಸ್ಪಷ್ಟ ಮಾನದಂಡ ರೂಪಿಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದುಪಡಿಸಿರುವ ವಿಚಾರವು ರಾಜ್ಯದ ಒಂದೆರಡು ಜಿಲ್ಲೆಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಯಾವ […]

ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ ‘ನವೋನ್ಮೇಶ’ ರಾಜ್ಯ ಮಟ್ಟದ ಫೆಸ್ಟ್ ಸಮಾರೋಪ: ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ನವೋನ್ಮೇಶ’ ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಸಮಾರೋಪ ಸಮಾರಂಭವು ಶುಕ್ರವಾರ ಸಂಜೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಖ್ಯಾತ ಚಲನಚಿತ್ರ ನಟ ವಜ್ರಂಗ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೋರಿದ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ […]

ಎಸ್‌ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ನೇರ ಪ್ರಸಾರ ವೀಕ್ಷಣೆ

ಬ್ರಹ್ಮಾವರ: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಆರಕ್ಷಕ ಠಾಣೆ ಹಾಗೂ ಎಸ್‌ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ದೇಶದ ಏಕತೆ, ಅಖಂಡತೆ ಹಾಗೂ ಸಮಗ್ರತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ನೇರ ಪ್ರಸಾರದ […]