ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ […]

ನೇರ ಸಂದರ್ಶನ

ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ನವೆಂಬರ್ 3 ರಂದು ನೇರ ಸಂದರ್ಶನ ನಡೆಯಲಿದ್ದು ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಅಂಕಪಟ್ಟಿಯೊಂದಿಗೆ ಸಂದರ್ಶನದಲ್ಲಿ ಭಾಗಿಯಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರಕಾರಿ ಕಚೇರಿಗಳಿಗೆ ಬಂದಾಗ ಅದಕ್ಕೆ ಸ್ಪಂದಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವುದಿಲ್ಲ ಸರಿಯಲ್ಲ. ಒಂದೊಮ್ಮೆ ನಿರ್ಲಕ್ಷ್ಯ ವಹಿಸುವುದು ಕಂಡು ಬಂದಲ್ಲಿ ಅವರು ಮೇಲೆ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ […]

ತಾರತಮ್ಯವಿಲ್ಲದ ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನ: ರಿಜ್ವಾನ್ ಅರ್ಷದ್ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ ಉಸ್ತುವಾರಿ ಸಚಿವರು

ಉಡುಪಿ: ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ ಕಾನೂನುಗಳನ್ನು, ನೀತಿ-ನಿಯಮಾವಳಿಗಳನ್ನು ರೂಪಿಸುತ್ತವೆ. ಶಿಕ್ಷಣ, ಜ್ಞಾನ, ಉದ್ಯೋಗ ಎಲ್ಲಾ ಕ್ಷೇತ್ರಗಳಲ್ಲೂ ತಾರತಮ್ಯವಿಲ್ಲದ ಎಲ್ಲರಿಗೂ ಸಮಾನ ಅವಕಾಶಗಳನ್ನು ಸಂವಿಧಾನ ನಮಗೆ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ಅವರು ಇಂದು ಮಣಿಪಾಲ ಗಣಿತ ನಗರದಲ್ಲಿರುವ ಜ್ಞಾನಸುಧಾ ಕಾಲೇಜಿನ ಶಾಂತಿ […]