ಹಿಂದೂ ಸಂಘಟನೆ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಎಸ್ಪಿ- ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಪ್ರದೀಪ್ ಪೂಜಾರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಅವರ ನೇತೃತ್ವದಲ್ಲಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬಿಲ್ಲವ ಸಮುದಾಯದ ಮುಖಂಡರು ಹಾಗೂ ಮೃತ ಪ್ರದೀಪ್ ಪೂಜಾರಿ ಅವರ ಕುಟುಂಬಸ್ಥರು […]
KEAಯಿಂದ 218 ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಪ್ರಕಟ: ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ, ನ. 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಡಿಪ್ಲೊಮಾ ಪದವೀಧರರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಮಂಡಳಿಗಳಲ್ಲಿ ಖಾಲಿ ಇರುವ 218 ಗ್ರೂಪ್-ಸಿ ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಎಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಟೌನ್ ಪ್ಲಾನರ್ ಮತ್ತು ಡ್ರಾಫ್ಟ್ಸ್ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 26 ಕೊನೆಯ ದಿನವಾಗಿದೆ. ಯಾವ ವೃಂದದಲ್ಲಿ ಎಷ್ಟು ಹುದ್ದೆಗಳು? ಒಟ್ಟು 218 ಹುದ್ದೆಗಳ ಪೈಕಿ 187 […]
ಮಂಗಳೂರಿನಿಂದ 100 ಕಿ.ಮೀ ದೂರ ಸಮುದ್ರಕ್ಕೆ ಬಿದ್ದ ಮೀನುಗಾರನ ರಕ್ಷಣೆ: ಕೋಸ್ಟ್ ಗಾರ್ಡ್ನಿಂದ ತ್ವರಿತ ಕಾರ್ಯಾಚರಣೆ

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಭಾನುವಾರ ಮಧ್ಯರಾತ್ರಿ ಮಂಗಳೂರಿನಿಂದ ಸುಮಾರು 54 ನಾಟಿಕಲ್ ಮೈಲಿ (100 ಕಿ.ಮೀ.) ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ‘ಐಎಫ್ಬಿ ಶಿವ ಸಾಗರ್’ ಎಂಬ ಮೀನುಗಾರಿಕಾ ದೋಣಿಯಿಂದ ವಿಹೆಚ್ಎಫ್ (VHF) ಮೂಲಕ ತುರ್ತು ಕರೆ ಬಂದಿತ್ತು. ದೋಣಿಯಲ್ಲಿ ಬಲೆ ಎಳೆಯುತ್ತಿದ್ದ ಸಂದರ್ಭದಲ್ಲಿ ಮೀನುಗಾರನೊಬ್ಬ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದನು. ದೋಣಿಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣವೇ […]
ಗೂಗಲ್ ಜೆಮಿನಿಯಲ್ಲಿ ಹೊಸ ‘ಅವತಾರ’ ಫೀಚರ್: ನಿಮ್ಮದೇ ಹೋಲಿಕೆಯ ಎಐ ಅವತಾರ್ ರಚಿಸುವ ಒಂದು ಅದ್ಬುತ ಫೀಚರ್ ಇದು!

ನವದೆಹಲಿ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ನಡೆಸುತ್ತಿರುವ ಜಾಗತಿಕ ಸರ್ಚ್ ಇಂಜಿನ್ ದೈತ್ಯ ಗೂಗಲ್, ತನ್ನ ಜೆಮಿನಿ (Gemini) ಎಐ ಪ್ಲಾಟ್ಫಾರ್ಮ್ನಲ್ಲಿ ಹೊಸ ವೈಶಿಷ್ಟ್ಯವೊಂದನ್ನು ಪರಿಚಯಿಸಿದೆ. ಈ ಮೂಲಕ ಬಳಕೆದಾರರು ತಮ್ಮ ಮುಖದ ಹೋಲಿಕೆ ಹಾಗೂ ಧ್ವನಿಯನ್ನು ಹೊಂದಿರುವ ವೈಯಕ್ತಿಕ ಡಿಜಿಟಲ್ ಅವತಾರ್ಗಳನ್ನು ರಚಿಸಿಕೊಳ್ಳಬಹುದಾಗಿದೆ. ಈ ಹೊಸ ಫೀಚರ್ನ ವಿಶೇಷತೆಯೆಂದರೆ, ಸೃಷ್ಟಿಸಿದ ಎಐ ಅವತಾರ್ಗಳನ್ನು ಸ್ನೇಹಿತರು, ಕುಟುಂಬದ ಸದಸ್ಯರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಬಹುದು. ಅನುಮತಿ ಪಡೆದ ಇತರ ಬಳಕೆದಾರರು ಕೂಡ ತಮ್ಮ ಕ್ರಿಯೇಟಿವ್ […]
ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿರುವ ಮಳೆ: ಕರಾವಳಿ, ಮಲೆನಾಡಿನಲ್ಲಿ 3 ರಿಂದ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ!

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸದ್ಯದ ಹವಾಮಾನ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ಮಧ್ಯಾಹ್ನದ ನಂತರ ಮತ್ತು ಸಂಜೆ ವೇಳೆ ಗುಡುಗು ಸಹಿತ ಭರ್ಜರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು, ಹಾಸನ ಜಿಲ್ಲೆಯ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುವ ಮುನ್ಸೂಚನೆ ಇದೆ. […]