ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574810) ಇವರಿಂದ ಪಡೆದುಕೊಂಡು ಅರ್ಜಿ ನಮೂನೆಯಲ್ಲಿ ಅರ್ಜಿದಾರರ […]

ಉಡುಪಿ: ವಕೀಲರ ಮೇಲಿನ ಹಲ್ಲೆ ಖಂಡಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರಿಂದ ಪ್ರತಿಭಟನೆ

ಉಡುಪಿ: ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರು ಸಾಂಕೇತಿಕ ಪ್ರತಿಭಟನೆ ನಡೆಸಿದರು. ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ವಕೀಲರ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಟ್ಟಾರು ರತ್ನಾಕರ ಹೆಗ್ಡೆ, ಕಕ್ಷಿದಾರರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುವ ವಕೀಲರ ಮೇಲೆಯೇ ಹಲ್ಲೆ ಹಾಗೂ […]

ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ‘ರಾಮಾಯಣ’ ಮುಂಗಡ ಬುಕ್ಕಿಂಗ್‌ನಲ್ಲೇ ₹46 ಕೋಟಿ ಗಳಿಕೆ!

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ ಭಾಗ 1’ ಚಿತ್ರ ನವೆಂಬರ್ 5ರಂದು ವಿಶ್ವದಾದ್ಯಂತ ತೆರೆಕಾಣಲು ಸಿದ್ಧವಾಗಿದೆ. ಬಿಡುಗಡೆಗೆ ಮುನ್ನವೇ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲೇ ಭಾರತದಲ್ಲಿ ₹46 ಕೋಟಿ ಗಳಿಸಿದೆ. ಈಗಾಗಲೇ 11 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿದ್ದು, ಚಿತ್ರದ ಮೊದಲ ದಿನದ ಗಳಿಕೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ. ಮುಂಗಡ ಬುಕ್ಕಿಂಗ್‌ನಲ್ಲಿ ₹46.41 ಕೋಟಿ ಗಳಿಕೆ ಸಾಕ್ನಿಲ್ಕ್ ವರದಿಯ ಪ್ರಕಾರ, ನವೆಂಬರ್ 2ರ ಬೆಳಿಗ್ಗೆ 9 ಗಂಟೆಯ ವೇಳೆಗೆ ಭಾರತದಲ್ಲಿ ಚಿತ್ರದ […]

ರಾಷ್ಟ್ರೀಯ ಟೈಲರಿಂಗ್ ಸಮ್ಮೇಳನದಲ್ಲಿ ಉಡುಪಿಯ 90ಕ್ಕೂ ಅಧಿಕ ಕಲಾವಿದರ ಸಾಧನೆ

ಒಂದೂವರೆ ಗಂಟೆಯಲ್ಲಿ ಕೈಹೊಲಿಗೆಯಿಂದ ಬೇಬಿ ಫ್ರಾಕ್ ಹೊಲಿದು ಕೌಶಲ್ಯ ಪ್ರದರ್ಶನ ಉಡುಪಿ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 2ನೇ ರಾಷ್ಟ್ರೀಯ ಟೈಲರಿಂಗ್ ಸಮ್ಮೇಳನದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು 2,000 ಮಂದಿ ಟೈಲರಿಂಗ್ ಕಲಾವಿದರು ಹಾಗೂ ತರಬೇತುದಾರರು ಭಾಗವಹಿಸಿದ್ದರು. ಉಡುಪಿ ಜಿಲ್ಲೆಯಿಂದ 90ಕ್ಕೂ ಅಧಿಕ ಮಂದಿ ಭಾಗವಹಿಸಿ ತಮ್ಮ ಹೊಲಿಗೆ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿ ಜಿಲ್ಲೆಗೆ ಹೆಮ್ಮೆ ತಂದರು. ಸಮ್ಮೇಳನದಲ್ಲಿ ಭಾಗವಹಿಸಿದ ಕಲಾವಿದರಿಗೆ ಒಂದೂವರೆ ಗಂಟೆಯ ಅವಧಿಯಲ್ಲಿ ಕೈಹೊಲಿಗೆಯ ಮೂಲಕ 2ರಿಂದ 4 ವರ್ಷದ ಮಗುವಿಗೆ ಬೇಕಾದ ಬೇಬಿ […]

ಡಾ. ಜಿ. ರಾಮಕೃಷ್ಣ ಆಚಾರ್ ಜೀವನಗಾಥೆ ಪುಸ್ತಕ ರೂಪದಲ್ಲಿ ಅನಾವರಣ,ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ Village Boy to Global Rice Techie’ ಕೃತಿ ಬಿಡುಗಡೆ

ಗ್ರಾಮೀಣ ಪರಿಸರದಲ್ಲಿ ಬೆಳೆದು, ಸ್ವಂತ ಪರಿಶ್ರಮ ಮತ್ತು ಛಲದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಉದ್ಯಮಿ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಗಾಥೆ ಇದೀಗ ಪುಸ್ತಕ ರೂಪದಲ್ಲಿ ಹೊರಬಂದಿದೆ. ‘Village Boy to Global Rice Techie’ ಎಂಬ ಜೀವನಚರಿತ್ರೆಯನ್ನು ನವೆಂಬರ್ 2ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನಾವರಣಗೊಳಿಸಿದರು. ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಯಾಗಿದ್ದು, ಎಂ. ರಾಘುರಾಮ್ ಅವರು ಪುಸ್ತಕವನ್ನು ರಚಿಸಿದ್ದಾರೆ. ಗ್ರಾಮೀಣ ಬದುಕಿನಿಂದ ಜಾಗತಿಕ […]