ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾದ್ರೆ ಮುಂದಿನ ಚುನಾವಣೆಯಲ್ಲಿ ಪ್ರಚಾರಕ್ಕೆ ಬರಲ್ಲ – ರಾಹುಲ್ಗೆ ಸಿದ್ರಾಮಯ್ಯ ಚಾರ್ಜ್ಶೀಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ದೆಹಲಿಯಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah), ತಮ್ಮ ವಿರುದ್ಧ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ಸ್ಟಿಂಗ್ ಆಪರೇಷನ್ (Sting Operation) ವಿಡಿಯೋ ವಿಚಾರವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಮಾತುಕತೆ ನಡೆಸಿರುವ ಸಿಎಂ, ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪಿಸುವಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. ನಿಮ್ಮ ಮಾತಿಗೆ ಗೌರವ ನೀಡಿ ರಾಜೀನಾಮೆ ನೀಡಿದೆ. ಮುಂದೆ ಚುನಾವಣೆಯಲ್ಲೂ […]
ಇರಾನ್ ಖೇಷ್ಮ್ ದ್ವೀಪದ ಮೇಲೆ ಅಮೆರಿಕ ದಾಳಿ – ಕಚ್ಚಾ ತೈಲ ಬೆಲೆ ಏರಿಕೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಕೊನೆಗೊಳಿಸಲು ರಾಜತಾಂತ್ರಿಕ ಮಾತುಕತೆಗಳು ಮುಂದುವರಿದಿರುವ ನಡುವೆಯೇ, ಇರಾನ್ನ ಖೇಷ್ಮ್ ದ್ವೀಪದ(Iran’s Qeshm Island) ಮೇಲೆ ಅಮೆರಿಕ ಪಡೆಗಳು ದಾಳಿ(US Strike) ನಡೆಸಿವೆ ಎಂಬ ವರದಿಗಳ ಬೆನ್ನಲ್ಲೇ ಮಂಗಳವಾರ ಏಷ್ಯನ್ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ಕಚ್ಚಾ ತೈಲ ದರದಲ್ಲಿ(Oil Prices) ಮತ್ತೆ ಏರಿಕೆ ಕಂಡುಬಂದಿದೆ. ಅಮೆರಿಕದ ಪಡೆಗಳು ಇರಾನ್ನ ಖೇಷ್ಮ್ ದ್ವೀಪದ ಮೇಲೆ ದಾಳಿ ನಡೆಸಿವೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ವಾಣಿಜ್ಯ […]
ಉದ್ಯೋಗಾವಕಾಶ

ಕ್ಯಾಮೆರಾಮನ್, ವಿಡಿಯೋ ಎಡಿಟರ್ ಗೆ ಉದ್ಯೋಗಾವಕಾಶ ನಡೆಯುತಿದು ಆಸಕ್ತರು ಕೂಡಲೇ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9180139612
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ ಗ್ಲೆನ್ ಮ್ಯಾಕ್ಸ್ವೆಲ್

ಮೆಲ್ಬೋರ್ನ್: ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ಬಿಡುಗಡೆಯಾದ ‘ದಿ ಫೈನಲ್ ವರ್ಡ್’ ಪಾಡ್ಕಾಸ್ಟ್ನಲ್ಲಿ ಮಾತನಾಡಿದ ಅವರು, ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ವಿಕ್ಟೋರಿಯಾ ತಂಡದ ಪರ ದೇಶೀಯ 50 ಓವರ್ ಹಾಗೂ ನಾಲ್ಕು ದಿನಗಳ ಪ್ರಥಮ ದರ್ಜೆ ಕ್ರಿಕೆಟ್ಗೂ ವಿದಾಯ ಹೇಳಿದ್ದಾರೆ. ಕ್ರಿಕೆಟ್ ಅಭಿಮಾನಿಗಳಲ್ಲಿ ‘ದಿ ಬಿಗ್ ಶೋ’ ಎಂದೇ ಗುರುತಿಸಿಕೊಂಡಿರುವ 38 ವರ್ಷದ ಮ್ಯಾಕ್ಸ್ವೆಲ್, ಆಸ್ಟ್ರೇಲಿಯಾ ಪರ 149 ಏಕದಿನ, 130 ಟಿ20 ಹಾಗೂ 7 […]
‘ಮುರಸು’ಚಂಡಮಾರುತ ಪ್ರಭಾವ: ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಭಾರಿ ಮಳೆ ಸಾಧ್ಯತೆ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಚಂಡಮಾರುತ ‘ಮುರಸು’ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಚಂಡಮಾರುತದ ಪರಿಣಾಮ ಸುರಿಯುತ್ತಿರುವ […]