ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ – ಎಸ್ಪಿ ಹರಿರಾಂ ಶಂಕರ್ ಹೇಳಿದ್ದೇನು?

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರವಾಗಿ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮತ್ತು ಹಂಚಿಕೊಂಡಿರುವ 150 ಖಾತೆಗಳನ್ನು ಈಗಾಗಲೇ ಗುರುತಿಸಿದ್ದು, ಇದರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ನೊಂದ ಮಹಿಳೆಯ ತೆಜೋವಧೆ ಮಾಡಿರುವ ವಿರುದ್ಧ ಕ್ರಮ:ಈ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋ, ಆಡಿಯೋ ರೆಕಾರ್ಡ್, ವೈಜ್ಞಾನಿಕ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಮಾಹಿತಿ ನೀಡಿದ […]

ಉಡುಪಿ: ನ.3ರಿಂದ ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.3ರ ಬೆಳಗ್ಗೆ 6 ಗಂಟೆಯಿಂದ ನ.7ರ ಬೆಳಗ್ಗೆ 10 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆಗಿರುವ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಅನುಮತಿಯಿಲ್ಲದೆ ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಇತರ ಸಾರ್ವಜನಿಕ ಕಾರ್ಯಕ್ರಮ ಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು […]