ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ನಿರ್ಧಾರ

ಉಡುಪಿ: ಕಾರ್ಕಳದ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆ ಪುನರ್ ನಿರ್ಮಾಣ ಹಾಗೂ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈ ಸಂಬಂಧ ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ವಿಶೇಷ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದರು. ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ […]

ನ.29ರಂದು ಸೋದೆ ಮಠದ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತ; ಉಡುಪಿಯಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ

ಉಡುಪಿ: ಸೋದೆ ಶ್ರೀ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ 2028–30ನೇ ಸಾಲಿನ ಎರಡನೇ ಶ್ರೀಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ನವೆಂಬರ್ 29ರಂದು ಬಾಳೆ ಮುಹೂರ್ತ ನೆರವೇರಲಿದೆ. ಇದೇ ಸಂದರ್ಭದಲ್ಲಿ ಬಾಳೆ ಕೃಷಿಯ ಮಹತ್ವ, ವೈವಿಧ್ಯಮಯ ತಳಿಗಳು, ವೈಜ್ಞಾನಿಕ ಕೃಷಿ ಪದ್ಧತಿ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪರಿಚಯಿಸುವ ಉದ್ದೇಶದಿಂದ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಉಡುಪಿಯಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಆಯೋಜಿಸಲಾಗಿದೆ. ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದ […]

ಟ್ರಂಪ್‌ಗೆ ಸೋಲು, ಷೇರುಪೇಟೆಯಲ್ಲಿ ದೀಪಾವಳಿ ಧಮಾಕ: ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಬಂಪರ್ ಲಾಭ

ಮುಂಬೈ: ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌(Donald Trump) ಅವರ ರಿಪಬ್ಲಿಕನ್‌ ಪಕ್ಷ ಸೋತ ಬೆನ್ನಲ್ಲೇ ಭಾರತೀಯ ಷೇರುಪೇಟೆಯ ಹೂಡಿಕೆದಾರರಿಗೆ(Dalal Street investors) ಗುರುವಾರ ಬೆಳಗ್ಗೆ ಅನಿರೀಕ್ಷಿತ ಜಾಕ್‌ಪಾಟ್ ಹೊಡೆದಿದೆ. ಕಚ್ಚಾ ತೈಲ ದರದಲ್ಲಿ ಭಾರಿ ಕುಸಿತ, ವಿದೇಶಿ ಹೂಡಿಕೆದಾರರ ಭರ್ಜರಿ ಖರೀದಿ ಹಾಗೂ ಅಮೆರಿಕದ ವಾಲ್ ಸ್ಟ್ರೀಟ್ ಷೇರುಪೇಟೆಯ ಉತ್ಸಾಹದಿಂದಾಗಿ ದೇಶೀಯ ಷೇರು ಮಾರುಕಟ್ಟೆ ಮುಗಿಲೆತ್ತರಕ್ಕೆ ಜಿಗಿದಿದೆ. ಮಾರುಕಟ್ಟೆ ಆರಂಭವಾದ ಕೇವಲ ಒಂದೇ ಗಂಟೆಯಲ್ಲಿ ಹೂಡಿಕೆದಾರರ ಸಂಪತ್ತು ಬರೋಬ್ಬರಿ 7 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಿದೆ. […]

ಗೃಹಲಕ್ಷ್ಮಿಯರಿಗೆ ದೀಪಾವಳಿ ಉಡುಗೊರೆ: 3 ಕಂತಿನ ಹಣ ಒಟ್ಟಿಗೆ ಬಿಡುಗಡೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 34, 35 ಮತ್ತು 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಒಟ್ಟು ₹7,405.86 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಗೃಹಲಕ್ಷ್ಮಿಯರಿಗೆ ಮೂರು ಕಂತಿನ ಹಣ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ […]

ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವ; 30 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವಕ್ಕೆ ಚಾಲನೆ ಸಿಗಲಿದೆ. ಸರಯೂ ನದಿ ತೀರದಿಂದ ಶ್ರೀರಾಮ ಜನ್ಮಭೂಮಿ ದೇವಾಲಯದವರೆಗೆ ದೀಪಗಳ ಬೆಳಕಿನಲ್ಲಿ ಅಯೋಧ್ಯೆ ಕಂಗೊಳಿಸಲಿದೆ. ಈ ಬಾರಿಯ ದೀಪೋತ್ಸವದಲ್ಲಿ ಐದು ದೇಶಗಳ ರಾಮಲೀಲಾ ತಂಡಗಳು ಭಾಗವಹಿಸಲಿವೆ. ಈ ತಂಡಗಳು ಶ್ರೀರಾಮನ ಜೀವನಗಾಥೆಯನ್ನು ರಾಮಲೀಲಾ ರೂಪದಲ್ಲಿ ಪ್ರದರ್ಶಿಸಲಿವೆ. ಇದರ ಜೊತೆಗೆ ವಿವಿಧ ರಾಜ್ಯಗಳ ಕಲಾವಿದರು ಜಾನಪದ ಕಲೆ, ನೃತ್ಯ, ಸಂಗೀತ ಹಾಗೂ ಸಾಂಪ್ರದಾಯಿಕ ಉಡುಗೆಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸಲಿದ್ದಾರೆ. ನ. […]