ಟ್ರಂಪ್ಗೆ ಸೋಲು, ಷೇರುಪೇಟೆಯಲ್ಲಿ ದೀಪಾವಳಿ ಧಮಾಕ: ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಬಂಪರ್ ಲಾಭ

ಮುಂಬೈ: ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್(Donald Trump) ಅವರ ರಿಪಬ್ಲಿಕನ್ ಪಕ್ಷ ಸೋತ ಬೆನ್ನಲ್ಲೇ ಭಾರತೀಯ ಷೇರುಪೇಟೆಯ ಹೂಡಿಕೆದಾರರಿಗೆ(Dalal Street investors) ಗುರುವಾರ ಬೆಳಗ್ಗೆ ಅನಿರೀಕ್ಷಿತ ಜಾಕ್ಪಾಟ್ ಹೊಡೆದಿದೆ. ಕಚ್ಚಾ ತೈಲ ದರದಲ್ಲಿ ಭಾರಿ ಕುಸಿತ, ವಿದೇಶಿ ಹೂಡಿಕೆದಾರರ ಭರ್ಜರಿ ಖರೀದಿ ಹಾಗೂ ಅಮೆರಿಕದ ವಾಲ್ ಸ್ಟ್ರೀಟ್ ಷೇರುಪೇಟೆಯ ಉತ್ಸಾಹದಿಂದಾಗಿ ದೇಶೀಯ ಷೇರು ಮಾರುಕಟ್ಟೆ ಮುಗಿಲೆತ್ತರಕ್ಕೆ ಜಿಗಿದಿದೆ. ಮಾರುಕಟ್ಟೆ ಆರಂಭವಾದ ಕೇವಲ ಒಂದೇ ಗಂಟೆಯಲ್ಲಿ ಹೂಡಿಕೆದಾರರ ಸಂಪತ್ತು ಬರೋಬ್ಬರಿ 7 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಿದೆ. […]
ಗೃಹಲಕ್ಷ್ಮಿಯರಿಗೆ ದೀಪಾವಳಿ ಉಡುಗೊರೆ: 3 ಕಂತಿನ ಹಣ ಒಟ್ಟಿಗೆ ಬಿಡುಗಡೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 34, 35 ಮತ್ತು 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಒಟ್ಟು ₹7,405.86 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಗೃಹಲಕ್ಷ್ಮಿಯರಿಗೆ ಮೂರು ಕಂತಿನ ಹಣ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ […]
ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವ; 30 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವಕ್ಕೆ ಚಾಲನೆ ಸಿಗಲಿದೆ. ಸರಯೂ ನದಿ ತೀರದಿಂದ ಶ್ರೀರಾಮ ಜನ್ಮಭೂಮಿ ದೇವಾಲಯದವರೆಗೆ ದೀಪಗಳ ಬೆಳಕಿನಲ್ಲಿ ಅಯೋಧ್ಯೆ ಕಂಗೊಳಿಸಲಿದೆ. ಈ ಬಾರಿಯ ದೀಪೋತ್ಸವದಲ್ಲಿ ಐದು ದೇಶಗಳ ರಾಮಲೀಲಾ ತಂಡಗಳು ಭಾಗವಹಿಸಲಿವೆ. ಈ ತಂಡಗಳು ಶ್ರೀರಾಮನ ಜೀವನಗಾಥೆಯನ್ನು ರಾಮಲೀಲಾ ರೂಪದಲ್ಲಿ ಪ್ರದರ್ಶಿಸಲಿವೆ. ಇದರ ಜೊತೆಗೆ ವಿವಿಧ ರಾಜ್ಯಗಳ ಕಲಾವಿದರು ಜಾನಪದ ಕಲೆ, ನೃತ್ಯ, ಸಂಗೀತ ಹಾಗೂ ಸಾಂಪ್ರದಾಯಿಕ ಉಡುಗೆಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸಲಿದ್ದಾರೆ. ನ. […]
ರಾಜ್ಯದ ರೈತರಿಗೆ ಶುಭ ಸುದ್ದಿ: ಬರದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ದೀಪಾವಳಿ (Deepavali) ಹೊತ್ತಿನಲ್ಲೇ ರಾಜ್ಯದ ರೈತರಿಗೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಬಂಪರ್ ಉಡುಗೊರೆ ನೀಡಿದ್ದಾರೆ. ಈ ಹಿಂದೆ 2,500 ರೂ. ಇದ್ದ ಬರ ಪರಿಹಾರದ ಮೊತ್ತವನ್ನ 5,000 ರೂ.ಗೆ ಹೆಚ್ಚಿಸಿರುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ರೈತರ ಖಾತೆಗೆ (Farmers Account) ಹಣ ಜಮೆ ಮಾಡುವ ಮೂಲಕ ಬರ ಪರಿಹಾರ ವಿರಣೆಗೆ ಸಿಎಂ ಚಾಲನೆ ನೀಡಿದರು. ಬಟನ್ ಕ್ಲಿಕ್ ಮಾಡುವ ಮೂಲಕ ರೈತರ ಖಾತೆಗೆ ಡಿಬಿಟಿ ಹಣ ಪಾವತಿಗೆ ಚಾಲನೆ ನೀಡಿದರು. […]
ಹಳ್ಳಿಗರೆಂದರೆ ಗುಗ್ಗುಗಳಲ್ಲ ಪ್ರಿಯಾಂಕ್ ಖರ್ಗೆಗೆ ಹೆಚ್ಡಿಕೆ ಖಡಕ್ ತಿರುಗೇಟು

ಬೆಂಗಳೂರು: ಹಳ್ಳಿಗರೆಂದರೆ ಗುಗ್ಗುಗಳಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರಿಗೆ ತಿರುಗೇಟು ನೀಡಿದ್ದಾರೆ. ಸ್ಟಿಂಗ್ ಆಪರೇಷನ್ ಕುರಿತ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರು, ಹೆಚ್.ಡಿ.ಕುಮಾರಸ್ವಾಮಿ ಹಳ್ಳಿ ಗುಗ್ಗುನಾ? ನಾವೇನು ಬಿಗ್ ಬಾಸ್ ನಡೆಸ್ತಿದ್ದೀವಾ, ತನಿಖೆಯನ್ನು ಲೈವ್ ಸ್ಟ್ರೀಮ್ ಮಾಡಲು ಆಗುತ್ತಾ? ತನಿಖೆ ಮಕ್ಕಳ ಆಟವಲ್ಲ, ಅವರಿಂದ ನನಗೆ ಪ್ರಮಾಣಪತ್ರ ಅಗತ್ಯವಿಲ್ಲ, ಕಲಿಯುವುದು ಏನೂ ಇಲ್ಲ” ಎಂದು […]