ಹಾಲು, ಮೊಸರು ಬಳಿಕ ನಂದಿನಿ ತುಪ್ಪ, ಬೆಣ್ಣೆ, ಪನೀರ್ ದರವೂ ಏರಿಕೆ! ಎಷ್ಟಾಗಿದೆ ಈಗ ರೇಟು?

ಬೆಂಗಳೂರು: ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಬೆನ್ನಲ್ಲೇ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಇದೀಗ ನಂದಿನಿ ತುಪ್ಪ, ಬೆಣ್ಣೆ, ಪನೀರ್ ಹಾಗೂ ತೃಪ್ತಿ ಹಾಲಿನ ದರಗಳನ್ನೂ ಪರಿಷ್ಕರಿಸಿದೆ. ಪರಿಷ್ಕೃತ ಹೊಸ ದರಗಳು ನವೆಂಬರ್ 4ರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ತನ್ನ ಜನಪ್ರಿಯ ನಂದಿನಿ ಹಾಲಿನ ದರವನ್ನು ಲೀಟರ್‌ಗೆ ₹8 ಹಾಗೂ ಮೊಸರಿನ ದರವನ್ನು ಲೀಟರ್‌ಗೆ ₹14 ಹೆಚ್ಚಿಸಿದ ಒಂದು ವಾರದ ಅಂತರದಲ್ಲೇ ಈ ದರ ಪರಿಷ್ಕರಣೆ ಮಾಡಲಾಗಿದೆ. ನವೆಂಬರ್ 4ರಂದು […]

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ರೂ.2 ಕೋಟಿ ಲಂಚದ ಆರೋಪ: ತನಿಖೆಗೆ ಕೇರಳ ಸರ್ಕಾರ ಆದೇಶ

ಕೇರಳ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ತನಿಖೆ ನಡೆಸಲು ಕೇರಳ ಸರ್ಕಾರ ಆದೇಶಿಸಿದೆ. ಸುಮಾರು 20 ವರ್ಷಗಳ ಹಿಂದೆ ಕೇರಳದ ಸಾರ್ವಜನಿಕ ನಿರ್ಮಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ರಸ್ತೆ ಕಾಮಗಾರಿಯ ಬಿಲ್‌ಗಳನ್ನು ಮಂಜೂರು ಮಾಡಲು ₹2 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಇದೀಗ ಮುನ್ನೆಲೆಗೆ ಬಂದಿದೆ. ಕೊಲ್ಲಂ ಜಿಲ್ಲೆಯ ಗುತ್ತಿಗೆದಾರ ಸಾಜನ್ ಎಂಬುವವರು ಈ ಕುರಿತು ವಿಜಿಲೆನ್ಸ್ ಇಲಾಖೆಗೆ ದೂರು ನೀಡಿದ್ದರು. ಸುಮಾರು […]

ಇಂದಿನಿಂದ ‘ರಾಮಾಯಣ’ ಚಿತ್ರದ ಅಬ್ಬರ: ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಮೋಡಿ ಮಾಡಲಿದೆ ಅದ್ದೂರಿ ಸಿನಿಮಾ!

ಜಗತ್ತಿನಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದ್ದ ಭಾರತೀಯ ಚಿತ್ರರಂಗದ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ ಅದ್ಧೂರಿಯಾಗಿ ತೆರೆಕಂಡಿದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಅವರ ಕಾಂಬಿನೇಷನ್‌ನ ಈ ಪೌರಾಣಿಕ ಮಹಾಕಾವ್ಯ ಮೊದಲ ದಿನವೇ ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಭು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸಿದ್ದಾರೆ. ಇನ್ನು ಲಂಕಾಧಿಪತಿ ರಾವಣನ ಖಡಕ್ ಪಾತ್ರದಲ್ಲಿ ನಟ ಯಶ್ ಮಿಂಚಿದ್ದಾರೆ. ಅವರ ವಿಭಿನ್ನ ಗೆಟಪ್, ಅಭಿನಯ […]

ಇಂದಿನಿಂದ ರೈತರ ಖಾತೆಗೆ ರೂ.2,500 ಮಧ್ಯಂತರ ಬೆಳೆ ಪರಿಹಾರ ಜಮೆ,ವಿಧಾನಸೌಧದಲ್ಲಿ ಪರಿಹಾರ ವಿತರಣೆಗೆ ಚಾಲನೆ

ಬೆಂಗಳೂರು: ಬರದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ರೈತರಿಗೆ ಸರ್ಕಾರದಿಂದ ಮಧ್ಯಂತರ ಬೆಳೆ ಪರಿಹಾರ ವಿತರಣೆ ಪ್ರಕ್ರಿಯೆ ಇಂದು (ನ.5) ಆರಂಭವಾಗಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಹಾರ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ರೈತರಿಗೆ ಮಧ್ಯಂತರ ಬೆಳೆ ಪರಿಹಾರವಾಗಿ ತಲಾ ₹2,500 ನೀಡುವುದಾಗಿ ಘೋಷಿಸಿತ್ತು. ಇದೀಗ ಪರಿಹಾರ ವಿತರಣೆಗೆ ಮುಹೂರ್ತ ನಿಗದಿಯಾಗಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಲಿದೆ. ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ […]

ಕಾರ್ಕಳ: ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ನವೆಂಬರ್ 14 ರಂದು ಹಕ್ಕೊತ್ತಾಯ ಸಭೆ

ಕಾರ್ಕಳ: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಗೆ ವ್ಯಾಪಕ ಜನಬೆಂಬಲ ಕ್ರೋಡೀಕರಿಸುವ ನಿಟ್ಟಿನಲ್ಲಿ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆಯ ಕರೆಯ ಮೇರೆಗೆ ಕಾರ್ಕಳ ವಕೀಲರ ಸಂಘದ ನೇತೃತ್ವದಲ್ಲಿ ತಾಲೂಕು ಮಟ್ಟದ ಹಕ್ಕೊತ್ತಾಯ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕುರಿತು ಕಾರ್ಕಳ ವಕೀಲರ ಸಂಘದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ನವೆಂಬರ್ 14ರ ಶನಿವಾರ ಮಧ್ಯಾಹ್ನ 3.30ಕ್ಕೆ ಕಾರ್ಕಳ ಅನಂತಶಯನದ ಬಳಿಯ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ‘ಕಾರ್ಕಳ ತಾಲೂಕು ಹಕ್ಕೊತ್ತಾಯ ಸಭೆ’ […]