ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿಯುಸಿ ಹೊರತುಪಡಿಸಿ ಇನ್ನುಳಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -1 ರ ಅಲೆಮಾರಿ / ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಯೋಜನೆಯ ಸೌಲಭ್ಯಕ್ಕಾಗಿ ವೆಬ್ಸೈಟ್ […]
ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬ್ಲರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬoದಲ್ಲಿ ಸಾರ್ವಜನಿಕರು ಮಾಹಿತಿ ಸಂಗ್ರಹಕ್ಕೆ ಅಭಿವೃದ್ಧಿಪಡಿಸಿರುವ ಕ್ಯೂಆರ್ ಕೋಡ್ನ ಮೂಲಕ ಮಾಹಿತಿ ಹಂಚಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center)ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ವಸ್ತುಗಳ ಬಳಕೆಯಿಂದ ಮಾನವ ಆರೋಗ್ಯದ ಮೇಲೆ […]
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿ & ಒ ಇಂಜಿನಿಯರ್ ಮತ್ತು ಲೆದರ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ & ಒ ಹುದ್ದೆಗೆ ಬ್ಯಾಚುಲರ್ ಆಫ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಬಿಪಿಒ ಅಥವಾ ಡಿಪ್ಲೋಮಾ ಇನ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಡಿಪಿಒ ವಿದ್ಯಾರ್ಹತೆ ಮತ್ತು ಸದ್ರಿ ಕ್ಷೇತ್ರದಲ್ಲಿ 2 […]
ನೇರ ಸಂದರ್ಶನ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 3 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ಅಥವಾ ಸರಕಾರದ ಮುಂದಿನ ಆದೇಶದವರೆಗೆ ನೇಮಕಾತಿ ಮಾಡುವ ಬಗ್ಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನವು ನವೆಂಬರ್ 12 ರಂದು ಬೆಳಗ್ಗೆ 11.30 ಕ್ಕೆ ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ […]
ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಉಡುಪಿ: ಪಾಠದ ಜೊತೆಗೆ ಮಕ್ಕಳಲ್ಲಿರುವ ವಿವಿಧ ಪ್ರತಿಭೆಗಳನ್ನು ಹೊರ ತರುವ ಉದ್ದೇಶದಿಂದ 2026-27ನೇ ಸಾಲಿನ ಪೋದಾರ್ ಶಾಲಾ ವಾರ್ಷಿಕೋತ್ಸವನ್ನು ಟೌನ್ ಹಾಲ್ ಸಭಾಂಗಣದಲ್ಲಿ ನಡೆಸಲಾಯಿತು. ರಾಷ್ಟ್ರಗೀತೆಯನ್ನು ಹಾಡಿ, ದೀಪ ಬೆಳಗಿಸಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲೆ ಶ್ರೀಮತಿ ನೇತ್ರಾ ಹೆಚ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಹೆಯ ಔಷಧಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೆ.ಶ್ರೀಧರ್ ರಂಗನಾಥ್ ಪೈ ಅವರು ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ […]