ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ: ಕೃಷ್ಣ ಮಠದ ರಥಬೀದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನಕದಾಸರ ಶಿಲಾಮಯ ಗುಡಿಗೆ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ವಿಡಿಯೋ ಕರೆ ಮೂಲಕ ಅನುಗ್ರಹ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಶೀರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೇಕಾರು, […]
ಮತದಾನದ ಹಕ್ಕು ಕಸಿಯುವ ಪ್ರಯತ್ನ: ಕಾಂಗ್ರೆಸ್ ಆರೋಪ

ಉಡುಪಿ: ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯವನ್ನು ರಕ್ಷಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ‘ವೋಟ್ ಚೋರಿ–ದೇಶ್ ಬಚಾವೋ’ ಅಭಿಯಾನದಡಿ ಗುರುವಾರ ಪ್ರತಿಭಟನೆ ಮತ್ತು ಜಾಥಾ ನಡೆಯಿತು. ಮಣಿಪಾಲದ ಕಾಯಿನ್ ಸರ್ಕಲ್ನಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಚುನಾವಣಾ ಆಯೋಗ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ […]
ವಿಗ್ರಹ ಕಳವು ಆರೋಪ ಸತ್ಯಕ್ಕೆ ದೂರ: ಬಾಳೆಕುದ್ರು ಮಠದ ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ

ಉಡುಪಿ: ಬಾಳೆಕುದ್ರು ಶ್ರೀಮಠದ ಹಳೆಯ ವಿಗ್ರಹಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿರುವುದಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಆಧಾರರಹಿತವಾಗಿವೆ ಎಂದು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ಮಧ್ಯಸ್ಥ ಸ್ಪಷ್ಟಪಡಿಸಿದ್ದಾರೆ. ನವೆಂಬರ್ 4ರಂದು ಕೆಲವು ಹಳೆಯ ಶಿಷ್ಯವರ್ಗದವರು ಎಂದು ಹೇಳಿಕೊಂಡವರು, ಪರಮಪೂಜ್ಯ ಶ್ರೀ ಶ್ರೀ ವಾಸುದೇವ ಸದಾಶಿವ ಶಿವಸ್ವಾಮಿಗಳು, ಆಡಳಿತಾಧಿಕಾರಿ ಎ. ಅನಿಲ್ ಕುಮಾರ್, ಸಿಬ್ಬಂದಿ ಜಯಲಕ್ಷ್ಮಿ ಹಾಗೂ ಪುರೋಹಿತ ಶ್ರೇಯಸ್ ಸೇರಿದಂತೆ ನಾಲ್ವರು ಮಠದ ಹಳೆಯ ವಿಗ್ರಹಗಳನ್ನು […]
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ವರ್ಗಾವಣೆ

ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಿಗೆ (ಡಿಐಜಿ) ಸಲ್ಲಿಸಲಾಗಿದೆ. ಇದರ ಆಧಾರದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾವಣೆಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ […]
ಮಧ್ಯಾಹ್ನದ 10 ನಿಮಿಷದ ಒಂದು ಸಣ್ಣ ನಿದ್ದೆ ದೇಹಕ್ಕೆ ಕೊಡುತ್ತೆ ನವಚೈತನ್ಯ: ಯಾಕೆ ಬೇಕು ಗೊತ್ತೇ ಈ ಮಧ್ಯಾಹ್ನದ ನಿದ್ದೆ?

ಮಧ್ಯಾಹ್ನದ ಊಟವಾದ ಅರ್ಧ ಗಂಟೆಯ ಬಳಿಕ ಸುಸ್ತು, ಸೋಮಾರಿತನ ಹಾಗೂ ನಿದ್ರೆಯ ಮಂಪರು ಆವರಿಸುವುದು ಬಹುತೇಕರ ಸಾಮಾನ್ಯ ಅನುಭವ. ಈ ಸಮಯದಲ್ಲಿ ಏಕಾಗ್ರತೆ ಕಡಿಮೆಯಾಗುವುದು, ಕಣ್ಣುಗಳು ಭಾರವಾಗುವುದು ಹಾಗೂ ಕೆಲಸದಲ್ಲಿ ಆಸಕ್ತಿ ಕುಗ್ಗುವುದು ಸಹಜ. ಇಂತಹ ಸಂದರ್ಭದಲ್ಲಿ 10ರಿಂದ 20 ನಿಮಿಷಗಳ ಕಾಲ ಸಣ್ಣ ನಿದ್ರೆ (ಮೈಕ್ರೋ ನ್ಯಾಪ್) ಮಾಡುವುದರಿಂದ ದೇಹ ಮತ್ತು ಮೆದುಳಿಗೆ ಹೊಸ ಚೈತನ್ಯ ದೊರೆಯಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ. ಮೈಕ್ರೋ ನ್ಯಾಪ್ ರಾತ್ರಿಯ ಪೂರ್ಣ ಪ್ರಮಾಣದ ನಿದ್ರೆಗೆ ಪರ್ಯಾಯವಲ್ಲ. ಆದರೆ ಹಗಲಿನಲ್ಲಿ […]