ಕೆಎಸ್ಆರ್ಟಿಸಿ ಮಾಸಿಕ ಬಸ್ ಪಾಸ್ ದರದಲ್ಲೂ ಭಾರಿ ಏರಿಕೆ: ಹಿರಿಯ ನಾಗರಿಕರಿಗೂ ತಪ್ಪದ ದರ ಏರಿಕೆಯ ಬಿಸಿ!

ಬೆಂಗಳೂರು: ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆಯ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಕೂಡ ಮಾಸಿಕ ಬಸ್ ಪಾಸ್ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಗ್ರಾಮಾಂತರ ಭಾಗದ ವೇಗದೂತ, ತಡೆರಹಿತ ಹಾಗೂ ಸಾಮಾನ್ಯ ಬಸ್ಗಳ ಮಾಸಿಕ ಪಾಸ್ಗಳ ಜತೆಗೆ ಪ್ರಮುಖ ನಗರಗಳ ನಗರ ಸಾರಿಗೆ ಬಸ್ ಪಾಸ್ ದರವನ್ನೂ ಪರಿಷ್ಕರಿಸಲಾಗಿದೆ. ಇದರಿಂದ ನಿತ್ಯ ಬಸ್ಗಳಲ್ಲಿ ಪ್ರಯಾಣಿಸುವ ನೌಕರರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ವೇಗದೂತ ಮತ್ತು […]
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯೊಂದಿಗೆ ಗುಡುಗು ಮತ್ತು ಮಿಂಚು ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮೊದಲ ದಿನವೇ ಕಲೆಕ್ಷನ್ ನಲ್ಲಿ ಭಾರೀ ಸೌಂಡ್ ಮಾಡಿದ ‘ರಾಮಾಯಣ’. ರೂ.127.50 ಕೋಟಿ ಗಳಿಸಿ ‘ಜೈಲರ್ 2’ ದಾಖಲೆ ಪುಡಿ ಪುಡಿ

ಮುಂಬೈ: ‘ದಂಗಲ್’ ಖ್ಯಾತಿಯ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ ಚಿತ್ರವು ಬಿಡುಗಡೆಯ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಆರಂಭ ಪಡೆದುಕೊಂಡಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ನವೆಂಬರ್ 5ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನವೇ ಜಾಗತಿಕ ಮಟ್ಟದಲ್ಲಿ 127.50 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ. ಬಿಡುಗಡೆಗೂ ಮುನ್ನವೇ ಉತ್ತಮ ಮುಂಗಡ ಟಿಕೆಟ್ ಬುಕಿಂಗ್ ದಾಖಲಿಸಿದ್ದ ಚಿತ್ರಕ್ಕೆ ಆರಂಭಿಕ […]
ರಾಜ್ಯದಲ್ಲಿ ರೂ.20 ಸಾವಿರ ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಪ್ಯಾಕೇಜ್ಗೆ ಸಂಪುಟ ಅಸ್ತು; 1,897 ಕಿ.ಮೀ. ರಸ್ತೆ ಮೇಲ್ದರ್ಜೆಗೆ

ಬೆಂಗಳೂರು: ರಾಜ್ಯದಾದ್ಯಂತ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟವು ಗುರುವಾರ ಸುಮಾರು 20,000 ಕೋಟಿ ರೂ. ವೆಚ್ಚದ ಬೃಹತ್ ಮೂಲಸೌಕರ್ಯ ಅಭಿವೃದ್ಧಿ ಪ್ಯಾಕೇಜ್ಗೆ ಅನುಮೋದನೆ ನೀಡಿದೆ. ರಾಜ್ಯ ಹೆದ್ದಾರಿಗಳು, ಪ್ರಮುಖ ಜಿಲ್ಲಾ ರಸ್ತೆಗಳು (MDR) ಹಾಗೂ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನಡುವಿನ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಈ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]
ಸರಕಾರಿ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಎಲ್ಲೆಡೆ ವಿರೋಧ

ನವದೆಹಲಿ: ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಮತದಾರರ ಗುರುತಿನ ಚೀಟಿ (EPIC) ಸಂಖ್ಯೆ ಹಾಗೂ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಪಂಚಾಯತ್ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರು, ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ಹಣ ಪಾವತಿ ಮಾಡುವ ಪ್ರಕ್ರಿಯೆಯಲ್ಲಿ ಇನ್ನು ಮುಂದೆ ಮತದಾರರ ಗುರುತಿನ ಚೀಟಿ ಸಂಖ್ಯೆ ಮತ್ತು ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯವಾಗಲಿದೆ ಎಂದು ತಿಳಿಸಿದ್ದಾರೆ. ಆಧಾರ್ ಕಾರ್ಡ್ಗಳನ್ನು ಸುಲಭವಾಗಿ ನೋಂದಣಿ ಕೇಂದ್ರಗಳ […]