ಸಾರ್ವಜನಿಕ ಹಿತಾಸಕ್ತಿಗೆ ಸಂಬoಧಿಸಿದ ಅಹವಾಲುಗಳನ್ನು ಆದ್ಯತೆಯ ಮೇಲೆ ಬಗೆಹರಿಸಿ: ಶಾಸಕ ಸುನಿಲ್ ಕುಮಾರ್

ಉಡುಪಿ: ಆಡಳಿತದಲ್ಲಿ ಸುಧಾರಣೆ ತರುವುದರೊಂದಿಗೆ ಜನರ ಅಹವಾಲುಗಳನ್ನು ಸ್ಥಳದಲ್ಲಿಯೇ ನಿವಾರಿಸಲು, ಸರಕಾರವು ವಿನೂತನ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸುತ್ತಾ ಬರುತ್ತಿದೆ. ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು ಸಾರ್ವಜನಿಕ ಹಿತಾಸಕ್ತಿಗೆ ಸಂಬoಧಿಸಿದ್ದಾಗಿದ್ದು, ಅವುಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಎರ್ಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಕಾರ್ಕಳ ಇವರ ವತಿಯಿಂದ ಅಜೆಕಾರು ಹೋಬಳಿಗೆ ಸಂಬoಧಿಸಿದoತೆ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ […]
ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ದೊಂಬೆ ಪಡುವರಿ ಗ್ರಾಮದಲ್ಲಿ ವಾಸವಾಗಿಕೊಂಡಿದ್ದ ನವೀನ್ ಜಂಬವಾಳಿ (38) ಎನ್ನುವ ವ್ಯಕ್ತಿಯು ಅಕ್ಟೋಬರ್ 17 ರಂದು ತನ್ನ ಮನೆ ಅಂಕೋಲಾಕ್ಕೆ ಹೋಗಿ ಬರುವುದಾಗಿ ತಿಳಿಸಿದ್ದು, ಅಲ್ಲಿಗೂ ಹೋಗದೆ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ ಸಾಧಾರಣ ಶರೀರ, ಕೋಲುಮುಖ, ಎಣ್ಣೆ ಮೈಬಣ್ಣ ಹೊಂದಿದ್ದು ಕೊಂಕಣಿ ಹಾಗೂ ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ: (08254)251033, 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ: (08254)251031, […]
ಪ್ರದೀಪ್ ಪೂಜಾರಿ ಸಾವು ಪ್ರಕರಣ: ಸಿಐಡಿ ಅಥವಾ ಸಿಬಿಐ ತನಿಖೆಗೆ ಆಗ್ರಹ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದ ತನಿಖೆಯಲ್ಲಿ ಹಲವು ಲೋಪಗಳಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡುತ್ತಿರುವ ಹೇಳಿಕೆಗಳ ಬಗ್ಗೆಯೂ ಅನುಮಾನಗಳಿವೆ. ಹೀಗಾಗಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಹೊರತಂದು ನ್ಯಾಯ ಒದಗಿಸಬೇಕು ಎಂದು ಪ್ರದೀಪ್ ಪೂಜಾರಿ ಅವರ ಸಹೋದರ ದಿಲೀಪ್ ಪೂಜಾರಿ ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿಗಳು ಸಮಾಜಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ […]
ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ ಕ್ಯಾಂಪಸ್ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯ ವಿವಿಧ ವಿಭಾಗಗಳ 1,148 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ವಿಭಾಗಗಳ ಸಾಧಕ ವಿದ್ಯಾರ್ಥಿಗಳನ್ನು ಸುವರ್ಣ ಪದಕ ನೀಡಿ ಗೌರವಿಸಲಾಯಿತು. ಘಟಿಕೋತ್ಸವ ನುಡಿಗಳನ್ನಾಡಿದ ಪದ್ಮಶ್ರೀ ಪುರಸ್ಕೃತ, ಡಿಆರ್ಡಿಎಲ್- ಡಿಆರ್ಡಿಒದ ಮಾಜಿ ನಿರ್ದೇಶಕ, ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಪುಣೆಯ ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿಯ ಮಾಜಿ ಕುಲಪತಿ ಡಾ. ಪ್ರಹ್ಲಾದ […]
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಎಸ್ಪಿ ವಿರುದ್ಧವೂ ತನಿಖೆಯಾಗಲಿ; ನ.11ರಂದು ಬೃಹತ್ ಹೋರಾಟ

ಉಡುಪಿ: ಪ್ರದೀಪ್ ಪೂಜಾರಿ ಸಂಶಯಾಸ್ಪದ ಸಾವು ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೂ ತನಿಖೆಗೆ ಒಳಪಡಿಸಬೇಕು. ಎಸ್ಐ ಪುನೀತ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಹಿಂದೂಪರ ಸಂಘಟನೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಆಗ್ರಹಿಸಿದರು. ಪ್ರದೀಪ್ ಸಾವಿಗೆ ಪೊಲೀಸ್ ಇಲಾಖೆಯೇ ನೇರ ಹೊಣೆ. ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸದಿರುವುದು ಹಾಗೂ ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂಬ ನೋವಿನಿಂದಲೇ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ಎಸ್ಐ ವಿರುದ್ಧ ಪ್ರಕರಣ […]