ರಾಜ್ಯದ ವಾಹನ ಸವಾರರಿಗೆ ಗುಡ್ನ್ಯೂಸ್: ಸಂಚಾರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿಶೇಷ ರಿಯಾಯಿತಿ ಸೌಲಭ್ಯ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ವಸೂಲಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ವಿಸ್ತರಿಸುವಂತೆ ಸಲ್ಲಿಕೆಯಾಗಿದ್ದ […]
ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಲಗೇಜ್ ಸಾಗಣೆ ಶುಲ್ಕ ಏರಿಕೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ವಿಧಿಸಿದೆ. ನಂದಿನಿ ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಲಗೇಜ್ ಸಾಗಣೆ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಕೆಎಸ್ಆರ್ಟಿಸಿಯ ನಾಲ್ಕು ಸಾರಿಗೆ ನಿಗಮಗಳು ಹಾಗೂ ನಗರ ಸಾರಿಗೆ ಬಸ್ಗಳ ಟಿಕೆಟ್ ದರ ಏರಿಕೆ ಮಾಡಿದ ಬೆನ್ನಲ್ಲೇ ಲಗೇಜ್ ಸಾಗಣೆ ದರವನ್ನೂ ಪರಿಷ್ಕರಿಸಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದ್ದು, ಪ್ರಯಾಣಿಕರು ಹೆಚ್ಚುವರಿ ಹಣ ಪಾವತಿಸಬೇಕಾಗಿದೆ. […]
ರಿಕ್ಷಾವೇ ಕಲೆಯ ಕ್ಯಾನ್ವಾಸ್; 12 ವರ್ಷಗಳಿಂದ ಜಯಕರ್ ಕುಂದರ್ರ ವಿಭಿನ್ನ ಪ್ರಯತ್ನ!

ಉಡುಪಿ: ಆಯುಧ ಪೂಜೆಯಂದು ವಾಹನಗಳಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ. ಆದರೆ ಕಟಪಾಡಿಯ ರಿಕ್ಷಾ ಚಾಲಕರೊಬ್ಬರು ಪ್ರತಿವರ್ಷ ತಮ್ಮ ರಿಕ್ಷಾವನ್ನೇ ವಿಭಿನ್ನ ಪರಿಕಲ್ಪನೆಗಳೊಂದಿಗೆ ಸಿಂಗರಿಸಿ, ಅದರ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಈ ವಿಶಿಷ್ಟ ಕಲಾತ್ಮಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರುತ್ತಿರುವವರು ಕಟಪಾಡಿ ಪೇಟೆಬೆಟ್ಟುವಿನ ಜಯಕರ್ ಕುಂದರ್. ಹೌದು, ಇದು ಕೇವಲ ಪ್ರಯಾಣಿಕರನ್ನು ಹೊತ್ತೊಯ್ಯುವ ರಿಕ್ಷೆಯಲ್ಲ; ಹತ್ತಾರು ಕಲ್ಪನೆಗಳನ್ನು ಹೊತ್ತು ಸಾಗುವ ಕಲಾವಿದನ ಸೃಜನಶೀಲ ವೇದಿಕೆ. ಮೊದಲ ವರ್ಷ ಹೂವಿನ ಅಲಂಕಾರದೊಂದಿಗೆ ಆರಂಭವಾದ ಜಯಕರ್ […]
ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು; ಶ್ರೀಗಂಗಾನಗರಕ್ಕೆ ಮೊದಲ ಸ್ಥಾನ, ದೆಹಲಿಯೂ ಲಿಸ್ಟ್ ನಲ್ಲಿ!

ನವದೆಹಲಿ: ವಿಶ್ವದ 50 ಅತ್ಯಂತ ವಾಯುಮಾಲಿನ್ಯಯುಕ್ತ ನಗರಗಳ ಪಟ್ಟಿಯಲ್ಲಿ ಭಾರತದ 49 ನಗರಗಳು ಸ್ಥಾನ ಪಡೆದಿವೆ. ರಾಜಸ್ಥಾನದ ಶ್ರೀಗಂಗಾನಗರ ವಿಶ್ವದಲ್ಲೇ ಅತ್ಯಂತ ಮಾಲಿನ್ಯಯುಕ್ತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ 24ನೇ ಸ್ಥಾನದಲ್ಲಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) 821ಕ್ಕೆ ಏರಿಕೆಯಾಗಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಪಂಜಾಬ್ನ ಬಟಿಂಡಾ 629 ಎಕ್ಯೂಐನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಹರಿಯಾಣದ ಸಿರ್ಸಾ 544 ಎಕ್ಯೂಐನೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು ಹರಿಯಾಣದ ಹಿಸಾರ್ನಲ್ಲಿ 516 ಹಾಗೂ […]
ರೇಷನ್ ಕಾರ್ಡ್ದಾರರಿಗೆ ಇಂದೇ ಕೊನೆಯ ಗಡುವು: ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಚೀಟಿ ರದ್ದಾಗುವ ಆತಂಕ!

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ಇಂದು (ನವೆಂಬರ್ 10) ಕೊನೆಯ ದಿನವಾಗಿದೆ. ಈಗಾಗಲೇ ಎರಡು ಬಾರಿ ಗಡುವು ವಿಸ್ತರಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮತ್ತೊಮ್ಮೆ ನವೆಂಬರ್ 10ರವರೆಗೆ ಅಂತಿಮ ಅವಕಾಶ ನೀಡಿತ್ತು. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆಯಿದೆ. ನವೆಂಬರ್ 4ರಂದು ಆಹಾರ ಇಲಾಖೆಯು ಇ-ಕೆವೈಸಿ ಪ್ರಕ್ರಿಯೆಗೆ ನೀಡಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಿತ್ತು. ಈ ಹಿಂದೆ ನಿಗದಿಪಡಿಸಿದ್ದ ಅವಧಿಯೊಳಗೆ ಲಕ್ಷಾಂತರ ಪಡಿತರ ಚೀಟಿದಾರರು […]