ಮಂಗಳೂರು: ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ: ಕಾಲೇಜು ಕ್ಯಾಂಟೀನ್, ಮುಲ್ಕಿ ಬೇಕರಿಗಳ ಪರಿಶೀಲನೆ

ಮಂಗಳೂರು: ಆಸ್ಪತ್ರೆ, ಕಾಲೇಜು ಕ್ಯಾಂಟೀನ್‌ ಹಾಗೂ ಬೇಕರಿಗಳಲ್ಲಿ ಸಾರ್ವಜನಿಕರಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯು ಮುಕ್ಕ ಹಾಗೂ ಮುಲ್ಕಿ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದ ತನಿಖಾ ತಂಡವು ಈ ವಿಶೇಷ ಪರಿಶೀಲನಾ ಅಭಿಯಾನವನ್ನು ಕೈಗೊಂಡಿದೆ. ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಕ್ಯಾಂಟೀನ್, ಮೆಸ್ ಪರಿಶೀಲನೆ: ಸುರತ್ಕಲ್ ಸಮೀಪದ […]

ನಮ್ಮ ಸೇನೆ ಸಿದ್ದವಾಗಿದೆ, ಯಾವುದೇ ಕ್ಷಣದಲ್ಲಿ ದಾಳಿ, ಇರಾನ್‌ಗೆ ಟ್ರಂಪ್ ಎಚ್ಚರಿಕೆ:

ವಾಷಿಂಗ್ಟನ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಉತ್ಪಾದನಾ ಸಾಮರ್ಥ್ಯ ಶೇ.85ರಷ್ಟು ಕಡಿಮೆಯಾಗಿದೆ. ಆದರೂ ಅಗತ್ಯಬಿದ್ದರೆ ಇರಾನ್ ವಿರುದ್ಧ ಮತ್ತೆ ಮಿಲಿಟರಿ ಕ್ರಮ ಕೈಗೊಳ್ಳಲು ಅಮೆರಿಕ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್, ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸುವ ಸಾಮರ್ಥ್ಯವನ್ನು ಶೇ.85ರಷ್ಟು ಕಡಿಮೆ ಮಾಡಿಕೊಂಡಿದೆ. ಅಲ್ಲದೆ, ಅಮೆರಿಕದೊಂದಿಗೆ ಸೌಜನ್ಯಯುತವಾಗಿ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಸಂಘರ್ಷಕ್ಕೆ ಅಂತ್ಯ ಹಾಡುವ ಸಾಧ್ಯತೆಯಿದೆ. […]

ಶ್ರೀಕೃಷ್ಣ ಮಠದಲ್ಲಿ ವೈಭವದ ಗೋಪೂಜೆ

ಉಡುಪಿ: ದೀಪಾವಳಿ ಹಬ್ಬದ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಗೋಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ವಿಶೇಷ ನೈವೇದ್ಯ ಸಮರ್ಪಿಸಿ ಪೂಜಿಸಲಾಯಿತು. ಬಳಿಕ ಗೋವುಗಳ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ದಿವಾನರು, ಪಾರುಪತ್ಯೆದಾರರು, ಸಿಬ್ಬಂದಿ ವರ್ಗ ಹಾಗೂ ಗೋಪಾಲಕರು ಉಪಸ್ಥಿತರಿದ್ದರು.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ; ಮೂರು ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ತನಿಖೆ: ಹರಿರಾಂ ಶಂಕರ್

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮೂರು ಪ್ರಕರಣಗಳ ತನಿಖೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಸಿಐಡಿಗೆ ಒಪ್ಪಿಸಿ ರಾಜ್ಯ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಅ.28ರಂದು ಯುವತಿ ಮನೆಗೆ ಅಕ್ರಮ ಪ್ರವೇಶಿಸಿ ಆಕೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಕುರಿತು ಪ್ರದೀಪ್ ಪೂಜಾರಿ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ, ಅದೇ ದಿನ ರಾತ್ರಿ ಪ್ರದೀಪ್ […]