ಉಡುಪಿಯಲ್ಲಿ ಡಿ.28ರಿಂದ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ

ಉಡುಪಿ: ಆದಿ ಶಂಕರಾಚಾರ್ಯರು ವೈದಿಕ ಸನಾತನ ಧರ್ಮದ ಉಳಿವು ಮತ್ತು ಬೆಳವಣಿಗೆಗೆ ಅಪಾರ ಕೊಡುಗೆ ನೀಡುವುದರ ಜತೆಗೆ, ಧಾರ್ಮಿಕ ಗೊಂದಲಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮಾಜಕ್ಕೆ ದಾರಿದೀಪವಾದವರು. ಅವರ ತತ್ವಾದರ್ಶಗಳನ್ನು ಸ್ಮರಿಸುವ ಹಾಗೂ ಹಿಂದೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿಸೆಂಬರ್ 28ರಿಂದ 30ರವರೆಗೆ ಉಡುಪಿಯಲ್ಲಿ ಮೂರು ದಿನಗಳ ಕಾಲ ‘ಶ್ರೀ ಶಂಕರ ವಿಜಯೋತ್ಸವ–2026’ ಆಯೋಜಿಸಲಾಗಿದೆ. ಶೃಂಗೇರಿ ಶ್ರೀಗಳ ಆಶಯದಂತೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಕಾರವಾರ ಜಿಲ್ಲೆಗಳ ಶಿಷ್ಯ ಸಮುದಾಯಗಳನ್ನು ಒಗ್ಗೂಡಿಸಿ ಉಡುಪಿಯ […]

ಸಂಸತ್ ಭದ್ರತಾ ಲೋಪ ಪ್ರಕರಣ – ಸಾಗರ್ ಶರ್ಮಾ, ಮನೋರಂಜನ್ ಡಿ ಜಾಮೀನು ಅರ್ಜಿ ತಿರಸ್ಕಾರ

ನವದೆಹಲಿ: 2023ರ ಸಂಸತ್ ಭದ್ರತಾ ಲೋಪ ಪ್ರಕರಣದ (Parliament Security Breach Case) ಆರೋಪಿಗಳಾದ ಸಾಗರ್ ಶರ್ಮಾ (Sagar Sharma) ಮತ್ತು ಮನೋರಂಜನ್ ಡಿ (Manoranjan D) ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ವಿಚಾರಣೆ ವೇಳೆ, ಆರೋಪಿಗಳ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸತ್ಯವೆಂದು ನಂಬಲು ಸಮಂಜಸವಾದ ಆಧಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಜಾಮೀನು ನೀಡುವುದಕ್ಕೆ ಇರುವ ಕಾನೂನು ನಿರ್ಬಂಧಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು […]

ಪಿಎಂ – ಸಿಎಂ ಹೆಲಿಕಾಪ್ಟರ್‌ ಎಕ್ಸ್‌ಕ್ಲೂಸಿವ್ ಟಾಕ್‌; ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಏನೇ ಇದ್ರೂ ಬನ್ನಿ ಎಂದ ಪ್ರಧಾನಿ

ಬೆಂಗಳೂರು: ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ನೆರವೇರಿಸಲು ನ.13 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಿದ್ದರು. ಈ ವೇಳೆ ಬೆಂಗಳೂರಿಂದ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ರಾಜ್ಯದ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆದಿದೆ. ಈ ವೇಳೆ ಕಸ್ತೂರಿ ರಂಗನ್ ವರದಿ, ರಾಜ್ಯದ ಬರ ಪರಿಸ್ಥಿತಿ, ಮೇಕೆದಾಟು ಯೋಜನೆ ಹಾಗೂ ರಾಜ್ಯದ ಅಭಿವೃದ್ಧಿ ವಿಚಾರಗಳು ಚರ್ಚೆಗೆ ಬಂದಿವೆ. ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ […]

ರಾಜ್ಯದಲ್ಲಿ ಮಿಕ್ಸ್ ಪೆಟ್ರೋಲ್ ಸಮರ – ಬಂಕ್‌ಗಳಲ್ಲಿ ಎಥೆನಾಲ್ ಡಿಸ್‌ಪ್ಲೇ ಕಡ್ಡಾಯ; ಶೀಘ್ರದಲ್ಲೇ ನ್ಯೂ ರೂಲ್ಸ್

ಬೆಂಗಳೂರು: ರಾಜ್ಯದಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ (Petrol Pumps) ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ (Ethanol Blendigng) ಪ್ರಮಾಣವನ್ನ ಡಿಜಿಟಲ್ ಡಿಸ್‌ಪ್ಲೇ ಮೂಲಕ ಕಡ್ಡಾಯವಾಗಿ ಪ್ರದರ್ಶಿಸುವ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ. ಪೆಟ್ರೋಲ್‌ನಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗಿದೆ ಎಂಬ ಮಾಹಿತಿಯನ್ನ ಗ್ರಾಹಕರಿಗೆ ಸ್ಪಷ್ಟವಾಗಿ ತಿಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. […]

ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆ ಇಂದು

ಸ್ವಗ್ರಾಮ ಮಲ್ಪೆಗೆ ತೆರಳಲು ನ್ಯಾಯಾಲಯದಿಂದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಆಗಮಿಸಿದ ರವಿ ಪೂಜಾರಿ ಉಡುಪಿ: ಭೂಗತ ಲೋಕದ ಕುಖ್ಯಾತ ಪಾತಕಿ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11 ಗಂಟೆಗೆ ಮಲ್ಪೆ ಸಮೀಪದ ನೆರ್ಗಿಯಲ್ಲಿ ನಡೆಯಲಿದೆ. ಸುಶೀಲಾ ಪೂಜಾರ್ತಿ ಅವರು ಐವರು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಪುತ್ರಿಯರು ಹಾಗೂ ರವಿ ಪೂಜಾರಿ ಸೇರಿದಂತೆ ಮೂವರು ಪುತ್ರರನ್ನು ಹೊಂದಿದ್ದರು. ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ […]