ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ: 112 ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ಮೀಸಲು?

ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಯುತ್ತಿದೆ. ಯೋಜನೆಯಡಿ ಸದ್ಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ 112 ಚಿಕಿತ್ಸಾ ಪ್ಯಾಕೇಜ್‌ಗಳನ್ನು ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತಗೊಳಿಸುವ ಪ್ರಸ್ತಾವನೆ ಮುಂದಿಡಲಾಗಿದೆ. ಈ ಬದಲಾವಣೆ ಜಾರಿಯಾದರೆ, ಕೆಲವು ಕಾಯಿಲೆಗಳ ಚಿಕಿತ್ಸೆಗಾಗಿ ಆಯುಷ್ಮಾನ್ ಭಾರತ್ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಬಹುದು. ಡಿಸೆಂಬರ್ 1ರಿಂದ ಹೊಸ ನಿಯಮ ಜಾರಿ? ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ […]

ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಇನ್ನಿಲ್ಲ.

ಕಾರ್ಕಳ: ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ,ಯಕ್ಷಗಾನ ಕಲಾವಿದ, ಕಾರ್ಕಳ ಸಾಹಿತ್ಯ ಸಂಘದ ಕಾರ್ಯದರ್ಶಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಬಿ.ಪದ್ಮನಾಭ ಗೌಡ ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು. 75 ವರ್ಷ ವಯಸ್ಸಾಗಿತ್ತು. ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಾಲೇಜಿಗೆ ತಾಲೂಕಿನಲ್ಲಿ ವಿಭಿನ್ನವಾದ ಶೈಕ್ಷಣಿಕ, ಸಾಂಸ್ಕೃತಿಕ ಮಹತ್ವವನ್ನು ತಂದುಕೊಟ್ಟ ಖ್ಯಾತಿ ಅವರಿಗಿತ್ತು. ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಪರೂಪದ ಯಕ್ಷಗಾನ ಸಂಗ್ರಹಾಲಯ ನಿರ್ಮಿಸಿದ ಹೆಗ್ಗಳಿಕೆ ಇವರದ್ದು. ಕಾಲೇಜಿನಿಂದ ನಿವೃತ್ತರಾದ ಬಳಿಕವೂ ವಿವಿಧ ಸಾಹಿತ್ಯ,ಕಲಾ ಸಂಘಟನೆಗಳಲ್ಲಿ […]