ಯುವ ಇಂಜಿನಿಯರ್ ಅಪಘಾತದಲ್ಲಿ ಮೃತ್ಯು- ಬೆಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ

ಉಡುಪಿ: ಉದ್ಯೋಗ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ಪ್ರತಿಭಾವಂತ ಯುವ ಇಂಜಿನಿಯ‌ರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತರನ್ನು ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗಿನ ಜಾವ ಚುಂಗಿಗುಡ್ಡೆಯಲ್ಲಿರುವ ಮನೆಯಿಂದ ಬೈಕ್‌ನಲ್ಲಿ ಬೆಂಗಳೂರಿನತ್ತ ಪ್ರಯಾಣ ಆರಂಭಿಸಿದ್ದ ಅಕ್ಷಯ್, ಪ್ರಯಾಣದ ನಡುವೆ ಅಪಘಾತ ಸಂಭವಿಸುವುದಕ್ಕೂ ಮುನ್ನ ತಾಯಿಗೆ ದೂರವಾಣಿ ಕರೆ ಮಾಡಿದ್ದರು […]

ಸೌಜನ್ಯಾ ಪ್ರಕರಣದ ಮರುತನಿಖೆ: ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲಿಸಿದ ಎಸ್‌ಐಟಿ

ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 2012ರ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಐವರು ಪ್ರಮುಖ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಸಂತ್ರಸ್ತೆಯ ಮಾವ ವಿಠಲ ಗೌಡ ಸೇರಿದಂತೆ ಕೃಷ್ಣಪ್ಪ, ಪುರಂದರ ಗೌಡ, ಯಶೋದಾ ಹಾಗೂ ಅವರ ಪುತ್ರ ಪ್ರತೀಕ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ಹಾಜರಾಗಿ ಅಧಿಕೃತ ಹೇಳಿಕೆ ನೀಡಿದ್ದಾರೆ. ಎಸ್‌ಐಟಿ ತನಿಖಾಧಿಕಾರಿ ಎಸ್‌ಪಿ ಲೋಕೇಶ್ ಜಗಲಾಸರ್ ಮತ್ತು ಎಸಿಪಿ ಮನೋಜ್ ನಾಯಕ್ ಅವರ ಸಮ್ಮುಖದಲ್ಲಿ ಹೇಳಿಕೆ […]

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ದ ಬಿರುಗಾಳಿ: 10 ದಿನಕ್ಕೆ 1,228 ಕೋಟಿ ಗಳಿಕೆ; ಜವಾನ್, ಕಾಂತಾರ ದಾಖಲೆ ಮುರಿದ ರಾಮಾಯಣ

ನವದೆಹಲಿ: ಕನ್ನಡಿಗ ನಟ ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ ಪಾರ್ಟ್-1’ (Ramayana Part 1) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಬಿಡುಗಡೆಯಾಗಿ ಕೇವಲ 10 ದಿನಗಳಲ್ಲಿ ಭಾರತದಲ್ಲಿ 685.60 ಕೋಟಿ ರೂ. ನಿವ್ವಳ ಗಳಿಕೆ ಮಾಡಿರುವ ಸಿನಿಮಾ, ವಿಶ್ವಾದ್ಯಂತ 1,228 ಕೋಟಿ ರೂ. ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ. ನವೆಂಬರ್ 5ರಂದು ಬಿಡುಗಡೆಯಾದ ಈ ಬಿಗ್ ಬಜೆಟ್ ಸಿನಿಮಾ ಮೊದಲ […]

Karnataka Weather: ರಾಜ್ಯಾದ್ಯಂತ ಮೋಡ ಕವಿದ ವಾತಾವರಣ, ಚಳಿ ಹೆಚ್ಚಳ; ಕರಾವಳಿಯಲ್ಲಿ 32 ಡಿಗ್ರಿ ತಾಪಮಾನ!

ಬೆಂಗಳೂರು ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಭಾನುವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂಜಾನೆ ಹಾಗೂ ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಮೋಡದ ವಾತಾವರಣದ ನಡುವೆಯೂ ಕೆಲವೆಡೆ ಬಿಸಿಲಿನ ತಾಪ ಅನುಭವಕ್ಕೆ ಬರಲಿದೆ. ರಾಜ್ಯಾದ್ಯಂತ ಹೇಗಿರಲಿದೆ ಹವಾಮಾನ? ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ವಿಶೇಷವಾಗಿ ಒಳನಾಡು ಮತ್ತು ಎತ್ತರದ ಪ್ರದೇಶಗಳಲ್ಲಿ […]