ಕಲಾವಿದರಿಗೆ ಇಲ್ಲಿದೆ ಗುಡ್ ನ್ಯೂಸ್, ನಿಮ್ಮ ಚಿತ್ರಕಲಾ ಪ್ರದರ್ಶನಕ್ಕೆ ಇಲ್ಲಿದೆ ವೇದಿಕೆ, ಕಲಾಕೃಷಿ ಚಿತ್ರಕಲಾ ಪ್ರದರ್ಶನಕ್ಕೆ ಕಲಾವಿದರಿಂದ ಚಿತ್ರಗಳ ಆಹ್ವಾನ

ಕಾರ್ಕಳ: ಕೃಷಿ ಬದುಕು, ಕೃಷಿ ಸಂಸ್ಕೃತಿ ಹಾಗೂ ಕೃಷಿಕರ ಜೀವನಶೈಲಿಯನ್ನು ಚಿತ್ರಕಲೆಯ ಮೂಲಕ ಪರಿಚಯಿಸುವ ಉದ್ದೇಶದಿಂದ ಕಾರ್ಕಳದ ಮಾನಸ ಆರ್ಟ್ ಫೌಂಡೇಶನ್ ವತಿ ಯಿಂದ ‘ಕಲಾಕೃಷಿ – ನಮ್ಮ ಬದುಕಿನ ಬಣ್ಣ’ ಎಂಬ ವಿಶೇಷ ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಕಳ ತಾಲೂಕಿನ ಬಾರಾಡಿಯ ಶೃಂಗ ಶ್ಯಾಮಲಾ ಎಸ್ಟೇಟ್ನಲ್ಲಿ ಈ ಪ್ರದರ್ಶನವು ಡಿ.13ರಂದು ನಡೆಯಲಿದೆ. ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಪ್ರದರ್ಶನ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ಬದುಕು, ಕೃಷಿ ಕಸುಬು ಹಾಗೂ […]
ಆನ್ಲೈನ್ ನಲ್ಲಿ ಪಾರ್ಟ್ ಟೈಂ ಕೆಲಸದ ಆಸೆಗೆ ಮರುಳಾಗಬೇಡಿ, ಮಂಗಳೂರಿನಲ್ಲಿ ಮನೆಯಿಂದಲೇ ಪಾರ್ಟ್ಟೈಮ್ ಕೆಲಸ ಎಂದು ನಂಬಿಸಿ ಯುವಕನಿಂದ ರೂ.4.49 ಲಕ್ಷ ಪೀಕಿದ ವಂಚಕರು!

ಮಂಗಳೂರು: ಮನೆಯಿಂದಲೇ ಪಾರ್ಟ್ಟೈಮ್ ಕೆಲಸ ಮಾಡುವ ಮೂಲಕ ಹೆಚ್ಚಿನ ಹಣ ಗಳಿಸಬಹುದು ಎಂಬ ಆಮಿಷವೊಡ್ಡಿದ ಸೈಬರ್ ವಂಚಕರು, ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ 28 ವರ್ಷದ ಯುವಕನಿಗೆ ಬರೋಬ್ಬರಿ 4,49,000 ರೂ. ವಂಚಿಸಿದ್ದಾರೆ. ಈ ಸಂಬಂಧ ಮಂಗಳೂರು ನಗರದ ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ. ಸ್ವಂತ ಜಮೀನಿನಲ್ಲಿ ಕೃಷಿ ಹಾಗೂ ಹೈನುಗಾರಿಕೆ ನಡೆಸುತ್ತಿದ್ದ ಯುವಕ ಪಾರ್ಟ್ಟೈಮ್ ಕೆಲಸದ ಹುಡುಕಾಟದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ […]
ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಎಚ್.ಡಿ. ಕುಮಾರಸ್ವಾಮಿ

ಉಡುಪಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಉಡುಪಿಗೆ ಆಗಮಿಸಿದ ಅವರು, ಕಾಪು ಮಾರಿಗುಡಿಗೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ದಂಪತಿ ಜೊತೆಗಿದ್ದರು. ದೇವಸ್ಥಾನದಲ್ಲಿ ಕುಟುಂಬದ ಸದಸ್ಯರೊಂದಿಗೆ ಗಂಟೆ ನಾದ ಸೇವೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಕ್ಷೇತ್ರದ ತಂತ್ರಿ ಕೆ.ಪಿ. […]
ಮೆಕ್ಕೆಕಟ್ಟು ಕುಲಾಲ್ ಸಂಘದ 14ನೇ ವಾರ್ಷಿಕ ಮಹಾಸಭೆ ಹಾಗೂ ಕ್ರೀಡೋತ್ಸವ ಸಂಭ್ರಮ

ಮೆಕ್ಕೆಕಟ್ಟು, ನ. 15: ಮೆಕ್ಕೆಕಟ್ಟು ಕುಲಾಲ್ ಸಂಘದ ವತಿಯಿಂದ 14ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಕ್ರೀಡೋತ್ಸವ–2026ರ ಉದ್ಘಾಟನಾ ಸಮಾರಂಭ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಮೈದಾನದಲ್ಲಿ ನವೆಂಬರ್ 15ರಂದು ಕೃಷ್ಣ ಕುಲಾಲ್ ನೆಡೂರ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ನಡೆಯಿತು. ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಶೇಡಿಕೋಡ್ಲು ವಿಠ್ಠಲ್ ಶೆಟ್ಟಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು , ಕುಲಾಲ್ ಸಮುದಾಯದ ಸರ್ವತೋಮುಖ […]
ಉಡುಪಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಕಾರ್ಮಿಕರಿಂದ ‘ಜಿಲ್ಲಾಧಿಕಾರಿ ಕಚೇರಿ ಚಲೋ’

ಉಡುಪಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಸಮಸ್ಯೆಯ ವಿರುದ್ಧ ಹಾಗೂ ಬಾಕಿ ಇರುವ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕರಿಗೆ ನೀಡುವ ಕಿಟ್ಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಣಿಪಾಲದ ಕಾಯಿನ್ ಸರ್ಕಲ್ […]