ಐಪಿಎಲ್ ಗೆ ಗುಡ್ ಬೈ ಹೇಳಿದ ಧೋನಿ: ಇನ್ನು ಸಿಎಸ್ಕೆ ತಂಡದ ಮೆಂಟರ್ ಆಗಿ ತಂಡ ಮುನ್ನಡೆಸಲಿರುವ ಕೂಲ್ ಕ್ಯಾಪ್ಟನ್!

ಚೆನ್ನೈ : ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿರುವ ಮಹೇಂದ್ರ ಸಿಂಗ್ ಧೋನಿ ಇದೀಗ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2027ರ ಐಪಿಎಲ್ ಟೂರ್ನಿಯಿಂದ ಆಟಗಾರನಾಗಿ ಮೈದಾನಕ್ಕಿಳಿಯುವ ಬದಲು ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಕಳೆದ ಎರಡು ದಶಕಗಳಿಂದ ಸಿಎಸ್ಕೆ ತಂಡದೊಂದಿಗೆ ನಂಟು ಹೊಂದಿರುವ ಧೋನಿ, ತಂಡದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಮುಂದಿನ ಜವಾಬ್ದಾರಿಯ ಬಗ್ಗೆ ಮಾತನಾಡಿರುವ ಫ್ರಾಂಚೈಸಿಯ ಪ್ರಮುಖರು, […]
ನ.22ರಂದು ಕೆಳಕಬ್ಯಾಡಿ ಅಂಬಾ ಭವಾನಿ ದೇವಸ್ಥಾನದ ಸುತ್ತುಪೌಳಿ ನಿರ್ಮಾಣಕ್ಕೆ ಶಿಲಾನ್ಯಾಸ

ಉಡುಪಿ: ಕೆಳಕಬ್ಯಾಡಿಯ ಶ್ರೀ ಅಂಬಾ ಭವಾನಿ ದೇವಸ್ಥಾನದ ಸುತ್ತುಪೌಳಿ ನಿರ್ಮಾಣ ಕಾರ್ಯಕ್ಕೆ ನವೆಂಬರ್ 22ರಂದು ಶಿಲಾನ್ಯಾಸ ನೆರವೇರಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಪ್ರಭಾಕರ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಮದ ಕೆಳಕಬ್ಯಾಡಿಯಲ್ಲಿರುವ ಪುರಾತನ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳನ್ನು ಉಳಿಸಿಕೊಂಡು ಬರಲಾಗುತ್ತಿದೆ. ಇದೀಗ ದೇವಸ್ಥಾನಕ್ಕೆ ಸುತ್ತುಪೌಳಿ ನಿರ್ಮಿಸುವ ಸಂಕಲ್ಪ ಕಾರ್ಯರೂಪಕ್ಕೆ ಬರುತ್ತಿದ್ದು, ಹಲವು ವರ್ಷಗಳಿಂದ […]
ನ.19ರಿಂದ ಮಾಹೆಯ 34ನೇ ಘಟಿಕೋತ್ಸವ: 10,277 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯ 34ನೇ ಘಟಿಕೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದ್ದು, ಈ ಬಾರಿ ಒಟ್ಟು 10,277 ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. ಇವರಲ್ಲಿ 207 ಮಂದಿ ಸಂಶೋಧನಾ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ (ಪಿಎಚ್ಡಿ) ಪದವಿ ಪ್ರದಾನ ಮಾಡಲಾಗುವುದು. ನವೆಂಬರ್ 19ರಿಂದ 22ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ನಾಲ್ಕು ದಿನಗಳ ಕಾಲ ಘಟಿಕೋತ್ಸವ ನಡೆಯಲಿದ್ದು, 7,694 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಬೆಂಗಳೂರು ಕ್ಯಾಂಪಸ್ನಲ್ಲಿ ನವೆಂಬರ್ 28 ಮತ್ತು 29ರಂದು ನಡೆಯುವ ಘಟಿಕೋತ್ಸವದಲ್ಲಿ 2,583 ವಿದ್ಯಾರ್ಥಿಗಳು ಪದವಿ […]
ಉಡುಪಿಯ ವಿಂಡೋರ್ಸ್ ಸೊಲ್ಯೂಷನ್ಸ್ & ಬಿಲ್ಡಿಂಟಚ್ ನಲ್ಲಿ ಉದ್ಯೋಗಾವಕಾಶ

ಉಡುಪಿಯ ವಿಂಡೋರ್ಸ್ ಸೊಲ್ಯೂಷನ್ಸ್ & ಬಿಲ್ಡಿಂಟಚ್ ನಲ್ಲಿ ಉದ್ಯೋಗಾವಕಾಶ ನಡೆಯುತಿದು ಆಸಕ್ತರು ಕೂಡಲೇ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9342231885
ಕೋಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ: ಎರಡು ವಾಹನಗಳು ಜಖಂ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುವ ಯೂ ಟರ್ನ್ ಬಳಿ ಮತ್ತೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೀನು ಸಾಗಾಟದ ಇನ್ಸುಲೇಟರ್ ವಾಹನ ಹಾಗೂ ಭಾರೀ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಘಟನೆಯಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.ಮೀನು ಸಾಗಾಟದ ಇನ್ಸುಲೇಟರ್ ವಾಹನವು ಹೆದ್ದಾರಿಯ ಪೂರ್ವ ಭಾಗದ ರಸ್ತೆಯಿಂದ ಏಕಾಎಕಿ ಬಲಭಾಗಕ್ಕೆ ತಿರುವು ಪಡೆಯುತ್ತಿದ್ದ ವೇಳೆ, ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ಭಾರೀ […]