ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಆದ್ಯತೆಯಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಉಡುಪಿ: ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳ ಮೇಲಾಗುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಜಾರಿಗೊಳಿಸಲಾದ ಮಕ್ಕಳ ರಕ್ಷಣಾ ನೀತಿ-ನಿಯಮಗಳನ್ನು ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ […]
ರೈಲಿನಲ್ಲಿ ಮೊಬೈಲ್ ಕಳವು, ಯುಪಿಐ ಮೂಲಕ ಹಣ ವರ್ಗಾವಣೆ: ಆರೋಪಿ ಬಂಧನ

ಉಡುಪಿ: ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡಿ, ಅದರ ಮೂಲಕ ಯುಪಿಐ ಬಳಸಿ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ವಿವಿಧ ಪೊಲೀಸ್ ಠಾಣೆಗಳ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆ.2ರಂದು ರುಬೆನ್ ಫೆರ್ನಾಂಡಿಸ್ ಎಂಬುವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬೆಳಗಿನ ಜಾವ ಸುಮಾರು 2 ಗಂಟೆಗೆ ಬೈಂದೂರು ರೈಲು ನಿಲ್ದಾಣದ ಸಮೀಪ ಅವರ ಬಳಿಯಿದ್ದ ₹17 ಸಾವಿರ ಮೌಲ್ಯದ […]
ಮಣಿಪಾಲ: ಬೈಕ್ ಕಳವು ಪ್ರಕರಣ- ಆರೋಪಿಯ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಹೋಂಡಾ ಶೈನ್ ಬೈಕ್‌ನ್ನು ಪತ್ತೆಹಚ್ಚಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಆರ್‌ಎಸ್‌ಬಿ ಸಭಾಭವನದ ಸಮೀಪದ ವೇಘಾ ಟ್ರಾನ್ಸ್‌ಪೋರ್ಟ್ಸ್ ಬಳಿ ಇರುವ ಶೆಡ್‌ನಲ್ಲಿ KA 20 EU 3431 ನೋಂದಣಿ ಸಂಖ್ಯೆಯ ಹೋಂಡಾ ಶೈನ್ ಬೈಕ್‌ನ್ನು ಅ.20ರಂದು ಬೆಳಿಗ್ಗೆ 9.30ಕ್ಕೆ ನಿಲ್ಲಿಸಿ ಅದರ ಮಾಲೀಕರು ಹುಬ್ಬಳ್ಳಿಗೆ ತೆರಳಿದ್ದರು. ಅ.22ರಂದು ರಾತ್ರಿ 9 ಗಂಟೆಗೆ ವಾಪಸಾಗಿ ನೋಡಿದಾಗ ಬೈಕ್ ಕಾಣೆಯಾಗಿತ್ತು. ಈ ಕುರಿತು […]
ಗ್ರಾಹಕರಿಗೆ ಅಡುಗೆ ಎಣ್ಣೆಯ ಹೆಸರಿನಲ್ಲಿ ದಾರಿತಪ್ಪಿಸಿದ “ಬೋಳಾಸ್” ಮಂಗಳೂರಿನ ಬೋಳಾಸ್ ಆಗ್ರೋ ಸಂಸ್ಥೆಯಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶಪಡಿಸಿದ ಅಧಿಕಾರಿಗಳು!

ಮಂಗಳೂರು: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರ್ಯಾಂಡಿಂಗ್ ಹಾಗೂ ಲೇಬಲಿಂಗ್ ಲೋಪದೋಷಗಳನ್ನು ಎಸಗಿದ ಆರೋಪದ ಮೇಲೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 1,240 ಕೆ.ಜಿ.ಗೂ ಅಧಿಕ ಅಡುಗೆ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ನಡೆಸಿದ ಅನಿರೀಕ್ಷಿತ ತಪಾಸಣೆ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. ತಪಾಸಣೆ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಗಂಭೀರ ಸ್ವರೂಪದ ಲೇಬಲಿಂಗ್ ಮತ್ತು ಬ್ರ್ಯಾಂಡಿಂಗ್ […]
ಉಡುಪಿ ದಕ್ಷಿಣ ಕನ್ನಡ ಸೇರಿದಂತೆ ಇಡೀ ಕರಾವಳಿ ಪ್ರದೇಶವು ಮುಂದಿನ ದಿನಗಳಲ್ಲಿ ದೇಶದ ಆರ್ಥಿಕ ಅಭಿವೃದ್ಧಿಗೆ ಬಲಿಷ್ಠ ಬೆಳವಣಿಗೆಯ ಎಂಜಿನ್ ಆಗಬಲ್ಲದು ಎಂದು ರೋಬೋಸಾಫ್ಟ್ ಸ್ಥಾಪಕ ರೋಹಿತ್ ಭಟ್ ವಿಶ್ವಾಸ

ಕರಾವಳಿಯಲ್ಲಿ ಅತ್ಯುತ್ತಮ ಶೈಕ್ಷಣಿಕ ಮೂಲ ಸೌಕರ್ಯ ಇದೆ. ಉತ್ತಮ ಶಿಕ್ಷಣ ವ್ಯವಸ್ಥೆಯ ಜತೆಗೆ ಸಾಕ್ಷರತೆಯ ಪ್ರಮಾಣವೂ ಉನ್ನತ ಮಟ್ಟದಲ್ಲಿದೆ. ಇಲ್ಲಿ 25 ಕ್ಕೂ ಅಧಿಕ ಎಂಜಿನಿಯರಿಂಗ್, 10 ಕ್ಕೂ ಅಧಿಕ ವೈದ್ಯಕೀಯ ಕಾಲೇಜು ಹಾಗೂ 150 ಕ್ಕೂ ಅಧಿಕ ಪದವಿ ಕಾಲೇಜುಗಳಿವೆ. ಪ್ರತಿಭಾವಂತ ಯುವಜನರ ದೊಡ್ಡ ಸಮೂಹವೇ ನಮ್ಮಲ್ಲಿದೆ. ಈ ಎಲ್ಲಾ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಉತ್ತಮ ವೇದಿಕೆಯನ್ನು ಕಲ್ಪಿಸಬೇಕಾಗಿದೆ ಎಂದು ತಿಳಿಸಿದರು. ಸಣ್ಣ ಪ್ರಯತ್ನಗಳ ಮೂಲಕ ದೊಡ್ಡ ಬದಲಾವಣೆ ತರುವುದಕ್ಕೆ ಸಾಧ್ಯವಿದೆ. ನನ್ನ ಅನುಭವದಲ್ಲಿ ಹೇಳುವುದಾದರೆ, ಜನರು […]