ಮಂಗಳೂರಿನ ಹೋಟೆಲ್ಗಳು, ಆಹಾರ ತಯಾರಿಕಾ ಘಟಕಗಳ ಮೇಲೆ ದಾಳಿ: ಕೆಲವೆಡೆ ಹೆಗ್ಗಣ ಓಡಾಟ, ಅಸುರಕ್ಷಿತ ಆಹಾರ ಸಂಗ್ರಹ, ಮಂಗಳೂರಿನ ಪ್ರತಿಷ್ಠಿತ ಐಸ್ ಕ್ರೀಂ ಘಟಕಕ್ಕೂ ನೋಟಿಸ್!

ಮಂಗಳೂರು: ಸಾರ್ವಜನಿಕರಿಗೆ ಶುಚಿ-ರುಚಿಯಾದ ಹಾಗೂ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಆಹಾರ ಸುರಕ್ಷತಾ ಇಲಾಖೆ ಮಂಗಳೂರಿನ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಇದಕ್ಕಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ವಿವಿಧೆಡೆ ಅನಿರೀಕ್ಷಿತ ತಪಾಸಣೆ ನಡೆಸಲಾಗಿದೆ ಮಂಗಳೂರಿನ ಐಡಿಯಲ್ ಐಸ್ ಕ್ರೀಮ್ ಘಟಕಕ್ಕೂ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ತಿಳಿಸಿದ್ದಾರೆ. ತೊಕ್ಕೊಟ್ಟಿನ ಎಂ.ಆರ್. ಸ್ವೀಟ್ಸ್ ಸಾಮಗ್ರಿ ಜಪ್ತಿ, ಪ್ರಕರಣ […]
“ಪ್ರತಿಯೊಬ್ಬ ಭಾರತೀಯನ ರಕ್ತದಲ್ಲೂ ರಾಮ ಇದ್ದಾನೆ”ಎಂದ ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಹೇಳಿಕೆಗೆ ಮುಸ್ಲಿಂ ಸಂಘಟನೆ ಗರಂ

ನವದೆಹಲಿ: ಗೀತರಚನೆಕಾರ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ (Javed Akhtar) ಅವರ ಹೇಳಿಕೆಯೊಂದು ಇದೀಗ ರಾಜಕೀಯ ಮತ್ತು ಧಾರ್ಮಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್ಲೂ ರಾಮ ಇದ್ದಾನೆ. ರಾಮ ಕೇವಲ ವ್ಯಕ್ತಿಯಲ್ಲ, ಅದೊಂದು ಜೀವನ ವಿಧಾನ ಹಾಗೂ ನೈತಿಕತೆಯ ಸಂಕೇತ ಎಂದು ಅವರು ನೀಡಿದ ಹೇಳಿಕೆಗೆ ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಿಮ್ಮ ಹೆಸರನ್ನು ಜಾವೇದ್ ಅಖ್ತರ್ ಬದಲಿಗೆ […]
ರಾಜ್ಯದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರೂ.16 ಸಾವಿರ ಕೋಟಿ ಅನುದಾನ: ಸಚಿವ ಈಶ್ವರ್ ಖಂಡ್ರೆ, ನ.20ರಂದು ಎರಡು ಯೋಜನೆಗಳಿಗೆ ಚಾಲನೆ

ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16 ಸಾವಿರ ಕೋಟಿ ರೂ. ವೆಚ್ಚದ ಎರಡು ಮಹತ್ವದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 20ರಂದು ಚಾಲನೆ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ […]
ಟ್ರಂಪ್ ಹತ್ಯೆಗೆ ಸಂಚು: ಪಾಕಿಸ್ತಾನ ಮೂಲದ ವ್ಯಕ್ತಿಗೆ 27 ವರ್ಷ ಜೈಲು ಶಿಕ್ಷೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಪರಾಧಿಗೆ ನ್ಯೂಯಾರ್ಕ್ ನ್ಯಾಯಾಲಯ 27 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು 48 ವರ್ಷದ ಆಸಿಫ್ ಮರ್ಚೆಂಟ್ (Asif Merchant) ಎಂದು ಗುರುತಿಸಲಾಗಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೂಚನೆಯ ಮೇರೆಗೆ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿತ್ತು. ಮಾಜಿ ಅಧ್ಯಕ್ಷ ಜೋ ಬೈಡನ್ ಮತ್ತು ನಿಕ್ಕಿ ಹ್ಯಾಲಿ ಅವರ […]
ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಬಳಿಯಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಮೃತ ವ್ಯಕ್ತಿ ಸುಮಾರು ಹತ್ತು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದ್ದು, ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಹೆಸರು ಹಾಗೂ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ವಾರಸುದಾರರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಸ್ಥಳದಿಂದ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು […]