ಪ್ರತಿಯೊಬ್ಬ ಭಾರತೀಯನ ರಕ್ತದ ಕಣದಲ್ಲಿ ರಾಮನಿದ್ದಾನೆ – ಜಾವೇದ್ ಅಖ್ತರ್ ಹೇಳಿಕೆಗೆ ಮುಸ್ಲಿಂ ಮುಖಂಡರ ವಿರೋಧ

ಗೀತರಚನೆಕಾರ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ (Javed Akhtar) ಅವರ ಹೇಳಿಕೆಯೊಂದು ಇದೀಗ ರಾಜಕೀಯ ಮತ್ತು ಧಾರ್ಮಿಕ ವಿವಾದಕ್ಕೆ ಕಾರಣವಾಗಿದೆ. ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್ಲೂ ರಾಮ (Lord Rama) ಇದ್ದಾನೆ. ರಾಮ ಕೇವಲ ವ್ಯಕ್ತಿಯಲ್ಲ, ಅದೊಂದು ಜೀವನ ವಿಧಾನ ಮತ್ತು ನೈತಿಕತೆಯ ಸಂಕೇತ ಎಂದು ಅವರು ಹೇಳಿದ್ದರು. ಈ ಹೇಳಿಕೆಗೆ ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಿಮ್ಮ ಹೆಸರನ್ನು ಜಾವೇದ್ ಅಖ್ತರ್ ಬದಲಿಗೆ […]
ಭದ್ರತಾ ಪಡೆಗಳ ಎನ್ಕೌಂಟ್ಗೆ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ

ಶ್ರೀನಗರ: ಕುಲ್ಗಾಮ್ನ ಸಿಆರ್ಪಿಎಫ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಲತೀಫ್ ಭಟ್ (Lateef Bhat) ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ಆರಂಭವಾಗಿತ್ತು. ಈ ವೇಳೆ, ಉಗ್ರ ಲತೀಫ್ ಭಟ್ ಅಡಗಿದ್ದ ಮಸೀದಿಯನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದವು. ಆತನಿಗೆ ಶರಣಾಗುವಂತೆ ಪೊಲೀಸರು ವಿಡಿಯೋ ಕರೆ ಮಾಡಿದ್ದರು. ಆದರೆ […]
ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ (Sonia Gandhi) ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪುಸ್ತಕ ಬಿಡುಗಡೆ ಕಾರ್ಯಕ್ರಮದ ಫೋಟೋ ವೈರಲ್ ಆಗಿತ್ತು. ಅದರಲ್ಲಿ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅವರು, ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ […]
ವಿದ್ಯುತ್ ತಂತಿ ತಗುಲಿ ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಉಡುಪಿ: ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದ ಆರೂರು ತೆಂಕುಬೆಟ್ಟುವಿನಲ್ಲಿ ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಲಾರಿಯಲ್ಲಿ ಒಣಹುಲ್ಲಿನ ಮೂಟೆಗಳನ್ನು ಸಾಗಿಸುತ್ತಿದ್ದ ವೇಳೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಹುಲ್ಲಿಗೆ ತಗುಲಿದೆ. ಇದರಿಂದ ಒಣಹುಲ್ಲಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.ತಕ್ಷಣ ಎಚ್ಚೆತ್ತುಕೊಂಡ ಚಾಲಕ, ಬೆಂಕಿ ಕಾಣಿಸಿಕೊಂಡ ಎರಡು ಹುಲ್ಲಿನ ಮೂಟೆಗಳನ್ನು ಲಾರಿಯಿಂದ ರಸ್ತೆಗೆ ಎಸೆದಿದ್ದಾರೆ. ಬಳಿಕ ಲಾರಿಯನ್ನು ಸಮೀಪದ ಕ್ರೀಡಾಂಗಣದ ಬಳಿಗೆ ಕೊಂಡೊಯ್ದು ನೀರು ಹಾಯಿಸುವ ಮೂಲಕ ಬೆಂಕಿ ನಂದಿಸಲು […]
ಉಡುಪಿ: ಪ್ರತಿಷ್ಠಿತ ಹೋಟೆಲ್ ನಲ್ಲಿ ಟೈಮ್/ ಫುಲ್ ಟೈಮ್ ಕೆಲಸಕ್ಕೆ ಜನ ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಪ್ರತಿಷ್ಠಿತ Samanvay Boutique Luxury Hotel ನಲ್ಲಿ ಪಾರ್ಟ್ ಟೈಮ್/ ಫುಲ್ ಟೈಮ್ ಹುದ್ದೆಗೆ ಜನ ಬೇಕಾಗಿದ್ದಾರೆ. * ರೂಮ್ ಬಾಯ್ * ವೇಯಿಟರ್ ಆಸಕ್ತರು ಸಂಪರ್ಕಿಸಿ: 6360751886