ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

ಶಾಸ್ತಿçÃಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿAದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ತ್ರಿಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ‍್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು […]

ಪರಶುರಾಮ ಥೀಂ ಪಾರ್ಕ್ ಗಾಗಿ ಬೆಂಗಳೂರಿನಿಂದ ಬೃಹತ್ ವಾಹನ ರ‌್ಯಾಲಿ: ನ.22ರಂದು ಬೈಲೂರಿನಲ್ಲಿ ಜನಾಗ್ರಹ ಸಭೆ

ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಂ ಪಾರ್ಕ್ ಅನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸುವಂತೆ ಆಗ್ರಹಿಸಿ ನವೆಂಬರ್ 22ರಂದು ಬೆಂಗಳೂರಿನಿಂದ ಬೈಲೂರಿಗೆ ಬೃಹತ್ ವಾಹನ ರ‌್ಯಾಲಿ ಹಾಗೂ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ. ಪರಶುರಾಮ ಥೀಂ ಪಾರ್ಕ್ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಈ ಹೋರಾಟಕ್ಕೆ ಮುಂದಾಗಿರುವುದಾಗಿ ಕಾರ್ಕಳ ಪರಶುರಾಮ ಥೀಂ ಪಾರ್ಕ್ ಜನಾಗ್ರಹ ಸಮಿತಿಯ ಸಂಚಾಲಕ ಸಚ್ಚಿದಾನಂದ ತಿಳಿಸಿದ್ದಾರೆ. ಅಂದು ಬೆಳಗ್ಗೆ ಬೆಂಗಳೂರಿನಿಂದ ವಾಹನ ರ‌್ಯಾಲಿ ಆರಂಭವಾಗಲಿದ್ದು, ಮಧ್ಯಾಹ್ನ 3 ಗಂಟೆಗೆ ಬೈಲೂರಿನಲ್ಲಿ ಜನಾಗ್ರಹ ಸಭೆ ನಡೆಯಲಿದೆ […]

ಉಡುಪಿ: ಮನೆಗೆ ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ

ಉಡುಪಿ: ಮನೆಗೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ 38 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕೇಶಾಪುರ ಗ್ರಾಮದವರಾದ ಸುಮಿತ್ರಾ (38), ಪ್ರಸ್ತುತ ಉಡುಪಿಯಲ್ಲಿ ವಾಸವಿದ್ದರು. ಕಲ್ಸಂಕದ ಬಳಿ ಮನೆಯೊಂದರಲ್ಲಿ ಮನೆಗೆಲಸ ಮಾಡುತ್ತಿದ್ದ ಅವರು, ನ.15ರಂದು ಬೆಳಿಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದು, ಇದುವರೆಗೆ ವಾಪಸಾಗಿಲ್ಲ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ನಾಪತ್ತೆಯಾದ ಸುಮಿತ್ರಾ ಅವರು ಸುಮಾರು 5 ಅಡಿ ಎತ್ತರ, ಸಾಧಾರಣ […]

ಪಂಚಾಯಿತಿ ಅನುದಾನವನ್ನು ಗ್ಯಾರಂಟಿ ಸಮಾವೇಶದ ಊಟಕ್ಕೆ ಬಳಸಲು ಆಕ್ಷೇಪ

ಉಡುಪಿ: ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯನ್ನು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಊಟೋಪಚಾರಕ್ಕೆ ಬಳಸುವಂತೆ ಸರ್ಕಾರ ಸೂಚಿಸಿರುವುದಕ್ಕೆ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸೌಕರ್ಯಗಳಿಗಾಗಿ ಮೀಸಲಾದ ಪಂಚಾಯಿತಿ ಅನುದಾನವನ್ನು ರಾಜಕೀಯ ಕಾರ್ಯಕ್ರಮಗಳ ವೆಚ್ಚಕ್ಕೆ ಬಳಸುವುದು ಸರಿಯಲ್ಲ. ಈ ಕುರಿತು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿರುವ ಅವರು, ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ನ.17ರಂದು ಜಿಲ್ಲಾ ಪಂಚಾಯಿತಿ […]

ಸರ್ಕಾರಿ ಶಾಲೆಗಳ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಉಚಿತ ನೋಟ್‌ಬುಕ್ ವಿತರಣೆ: ಮಧು ಬಂಗಾರಪ್ಪ

ರಾಯಚೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತವಾಗಿ ನೋಟ್‌ಬುಕ್ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಕೃಷಿ ವಿಶ್ವವಿದ್ಯಾಲಯದ ಬಸವೇಶ್ವರ ಸಭಾಂಗಣದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಆಯೋಜಿಸಿದ್ದ ‘ಮಿಷನ್ 40+ ಸಂಕಲ್ಪ 2.0’ ವಿಭಾಗಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿದ ಬಳಿಕ […]