ಉದ್ಯಮಿಗಳ ಸಾಲಮನ್ನಾ ಬಗ್ಗೆ ಸುನೀಲ್ ಕುಮಾರ್ ಮೊದಲು ಮಾತನಾಡಲಿ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತ ಉದ್ಯಮಿಗಳ ಸುಮಾರು 19 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿರುವ ಬಗ್ಗೆ ಶಾಸಕ ವಿ. ಸುನೀಲ್ ಕುಮಾರ್ ಮೊದಲು ಮಾತನಾಡಲಿ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ಶಾಸಕರು ಅಪಸ್ವರ ಎತ್ತುತ್ತಿರುವುದು ಅಸೂಯೆಯ ಮನೋಭಾವವನ್ನು ತೋರಿಸುತ್ತದೆ. ಜನರ ಬದುಕಿಗೆ ಆಸರೆಯಾಗಿರುವ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಶಾಸಕರು ಕಂಗಾಲಾಗಿದ್ದಾರೆ ಎಂದು […]
ರಾಜ್ಯದ ಕೃಷಿಕರಿಗೆ ಗುಡ್ ನ್ಯೂಸ್, ಇನ್ನು ಎಲ್ಲಾ ಭೂದಾಖಲೆಗಳು ಒಂದೇ ಕಡೆ ಲಭ್ಯ, ಶೀಘ್ರದಲ್ಲೇ ಕ್ಯೂಆರ್ ಕೋಡ್ ಆಧಾರಿತ ನಮೂನೆ 16-ಎ ಜಾರಿ!

ಬೆಂಗಳೂರು: ರಾಜ್ಯದ ರೈತರಿಗೆ ಭೂಮಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಒಂದೇ ನಮೂನೆಯಲ್ಲಿ ಒದಗಿಸಲು ಕಂದಾಯ ಇಲಾಖೆ ಸಿದ್ಧತೆ ನಡೆಸಿದೆ. ದೇಶದಲ್ಲೇ ಮೊದಲ ಬಾರಿಗೆ ಎಂಬ ಪರಿಕಲ್ಪನೆಯಡಿ ಕ್ಯೂಆರ್ ಕೋಡ್ ಆಧಾರಿತ ಹೊಸ ಮಾದರಿಯ ಸಮಗ್ರ ಪಹಣಿ ನಮೂನೆ 16-ಎ ಅನ್ನು ಶೀಘ್ರದಲ್ಲೇ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದರಿಂದ ರೈತರು ವಿವಿಧ ಭೂ ದಾಖಲೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆದಾಡುವುದು ತಪ್ಪಲಿದೆ. ರಾಜ್ಯ ಸರ್ಕಾರ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರೈತರಿಗೆ ದಾಖಲೆಗಳನ್ನು ಸುಲಭವಾಗಿ […]
ಮಂಗಳೂರು: ಎರಡು ದಿನದಲ್ಲಿ ಬ್ಯಾಂಕ್ ಖಾತೆಯಿಂದ ರೂ.1.44 ಲಕ್ಷ ಮಾಯ; ಆನ್ಲೈನ್ ವಂಚನೆ ಕುರಿತು ದೂರು ನೀಡಿದ ವ್ಯಕ್ತಿ

ಮಂಗಳೂರು: ಅಪರಿಚಿತರು ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಎರಡು ದಿನಗಳ ಅಂತರದಲ್ಲಿ ಹಂತ ಹಂತವಾಗಿ ಒಟ್ಟು ₹1,44,999 ವರ್ಗಾಯಿಸಿಕೊಂಡು ಆನ್ಲೈನ್ ವಂಚನೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು 55 ವರ್ಷದ ವ್ಯಕ್ತಿಯೊಬ್ಬರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುದಾರರು ನ.17ರಂದು ಪರಿಚಯದವರಿಗೆ ಹಣ ವರ್ಗಾಯಿಸುವ ಉದ್ದೇಶದಿಂದ ಫೋನ್ಪೇ ತೆರೆದು ವಹಿವಾಟಿನ ವಿವರ ಪರಿಶೀಲಿಸಿದ್ದಾರೆ. ಈ ವೇಳೆ ಅವರ ಬ್ಯಾಂಕ್ ಖಾತೆಯಿಂದ ₹70,000 ಅಪರಿಚಿತ ಖಾತೆಗೆ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ […]
ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣ: ಕೇರಳದಲ್ಲಿ ಪತ್ತೆಯಾದ ವಿದ್ಯಾರ್ಥಿನಿ, ನನಗೆ ಹೆತ್ತವರೇ ಬೇಡ ಎಂದು ನಿರಾಕರಣೆ!

ಮಂಗಳೂರು: ನಗರದ ಕಣಚೂರು ಮೆಡಿಕಲ್ ಕಾಲೇಜು ಆವರಣದಿಂದ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಂಗಳೂರು ಪೊಲೀಸರು ಕೇರಳದಲ್ಲಿ ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೇರೆ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಕುಟುಂಬಸ್ಥರೇ ಆಕೆಯನ್ನು ಬಲವಂತವಾಗಿ ಕರೆದೊಯ್ದಿದ್ದರು ಎನ್ನಲಾಗಿದೆ. ಇದೀಗ ರಕ್ಷಿಸಲ್ಪಟ್ಟ ವಿದ್ಯಾರ್ಥಿನಿ, “ನನಗೆ ಹೆತ್ತವರೇ ಬೇಡ, ಅವರೊಂದಿಗೆ ಹೋಗುವುದಿಲ್ಲ” ಎಂದು ಪೊಲೀಸರ ಮುಂದೆ ಸ್ಪಷ್ಟಪಡಿಸಿದ್ದಾಳೆ. ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ ಹಾಗೂ ಬಾಗಲಕೋಟೆ ಮೂಲದ ಹಿಂದೂ ಯುವಕ ಪರಸ್ಪರ […]
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಇನ್ನಷ್ಟು ಕಠಿಣ ನಿಯಮ ಜಾರಿ!

ಬೆಂಗಳೂರು: ಸುಪ್ರೀಂ ಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಬೆನ್ನಲ್ಲೇ, ಕರ್ನಾಟಕ ಸರ್ಕಾರವೂ ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಅಗತ್ಯ ನಿಯಮಾವಳಿ ರೂಪಿಸುವ ಸಿದ್ಧತೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದ್ದು, ಅಡ್ವೊಕೇಟ್ ಜನರಲ್ (ಎಜಿ) ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಬೈಕ್ ಟ್ಯಾಕ್ಸಿಗಳಿಗೆ ಹಳದಿ ಫಲಕ ಕಡ್ಡಾಯಗೊಳಿಸುವ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಬೈಕ್ ಟ್ಯಾಕ್ಸಿ ಸೇವೆಯನ್ನು ಯಾರೂ ಬೇಕಾಬಿಟ್ಟಿಯಾಗಿ ನಡೆಸಲು ಅವಕಾಶ ನೀಡದೆ, ಸಾರಿಗೆ […]