ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿದೆ 476 ಹುದ್ದೆಗಳು, ಅರ್ಹತೆ ಏನಿರಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 460 ಅಗ್ನಿಶಾಮಕ ಹಾಗೂ 16 ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ಒಟ್ಟು 476 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಭಾಷಾ ವಿಷಯದೊಂದಿಗೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ ರಸಾಯನಶಾಸ್ತ್ರ ವಿಷಯದೊಂದಿಗೆ ಪದವಿ ಪಡೆದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 31 ವರ್ಷ ನಿಗದಿಪಡಿಸಲಾಗಿದೆ. ಪ್ರವರ್ಗ […]
ಉಡುಪಿ: ಜಿಲ್ಲೆಯ ನಾಲ್ವರು ಬಿಜೆಪಿ ಶಾಸಕರಿಂದ ಸುದ್ದಿಗೋಷ್ಟಿ- ಗ್ರಾಮ ಪಂಚಾಯಿತಿ ಅನುದಾನವನ್ನು ಗ್ಯಾರಂಟಿ ಸಮಾವೇಶಕ್ಕೆ ಬಳಕೆಗೆ ವಿರೋಧ

ಉಡುಪಿ: ಗ್ರಾಮ ಪಂಚಾಯಿತಿ ಅನುದಾನವನ್ನು ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಊಟೋಪಚಾರಕ್ಕೆ ಬಳಕೆ ಮಾಡಲು ಸರ್ಕಾರ ಮುಂದಾಗಿರುವುದಕ್ಕೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗೋಷ್ಡಿಯಲ್ಲಿ ಅವರು ಜಿಲ್ಲೆಯ ಇತರೆ ಮೂವರು ಶಾಸಕರೊಂದಿಗೆ ಸುದ್ದಿಗೋಷ್ಟಿ ನಡೆಸಿದರು. ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಾದ ಹಣವನ್ನು ರಾಜಕೀಯ ಕಾರ್ಯಕ್ರಮಗಳಿಗೆ ಬಳಸುವುದು ಸರಿಯಲ್ಲ. ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸೌಕರ್ಯಗಳಿಗಾಗಿ ಬಳಕೆಯಾಗಬೇಕಾದ ಪಂಚಾಯಿತಿ ಅನುದಾನವನ್ನು ಗ್ಯಾರಂಟಿ ಸಮಾವೇಶದ ಊಟೋಪಚಾರಕ್ಕೆ ಬಳಸುವಂತೆ ಸೂಚಿಸಿರುವುದು ತಪ್ಪು ಎಂದು ತಿಳಿಸಿದ್ದಾರೆ. ಈ ಕುರಿತು […]
ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಸುನಿಲ್ ಕುಮಾರ್

ಉಡುಪಿ: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐದನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ. ಬಿಸಿಲು, ಚಳಿ ಎನ್ನದೆ ಹಗಲು-ರಾತ್ರಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಪ್ರತಿಭಟನಾನಿರತ ಮಹಿಳೆಯರು ಬೀದಿಯಲ್ಲೇ ಮಲಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಮಹಿಳಾ ವಿರೋಧಿ ಸರ್ಕಾರ ಎಂಬುದನ್ನು ತೋರಿಸುತ್ತದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟೀಕಿಸಿದರು. ಉಡುಪಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಇಚ್ಛೆಯಾಗಲೀ, […]
ಎಸ್ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

ಮಂಗಳೂರು: “ಗೋಲ್ಡ್ ಬ್ಯಾಂಕ್ʼʼ ಎಂದೇ ಪ್ರಸಿದ್ಧವಾಗಿರುವ ಎಸ್ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಸಾಧನೆಯನ್ನು ಪುರಸ್ಕರಿಸಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಶುಕ್ರವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ರಾಜ್ಯಮಟ್ಟದ ಸಮಾರೋಪ ಸಮಾರಂಭದಲ್ಲಿ ಪ್ರತಿಷ್ಠಿತ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಪ್ರಶಸ್ತಿ ಸ್ವೀಕರಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಪ್ರಶಸ್ತಿ ಪ್ರದಾನ ಮಾಡಿದರು. ಸಹಕಾರ […]
ಕ್ರಿಸ್ಮಸ್ಗೆ ತಿಂಗಳ ಮೊದಲೇ ಕೇಕ್ ಸಿದ್ಧತೆ; ಡ್ರೈಫ್ರೂಟ್ಸ್ಗೆ 60 ಲೀಟರ್ ಮದ್ಯದ ಅಭಿಷೇಕ!

ಉಡುಪಿ: ಕ್ರಿಸ್ಮಸ್ ಹಬ್ಬಕ್ಕೆ ಇನ್ನೂ ತಿಂಗಳಿಗೂ ಹೆಚ್ಚು ಸಮಯವಿದ್ದರೂ ಉಡುಪಿಯಲ್ಲಿ ಹಬ್ಬದ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು ನೀಡುವ ಕೇಕ್ ತಯಾರಿಯ ಭಾಗವಾಗಿ ಮಣಿಪಾಲದಲ್ಲಿ ಪಾಶ್ಚಾತ್ಯರ ವಿಶಿಷ್ಟ ಸಂಪ್ರದಾಯವಾದ ‘ಫ್ರೂಟ್ ಮಿಕ್ಸಿಂಗ್’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಬಗೆಬಗೆಯ ಡ್ರೈಫ್ರೂಟ್ಸ್ಗಳನ್ನು ರಾಶಿ ಹಾಕಿ, ಅವುಗಳಿಗೆ ಲೀಟರ್ಗಟ್ಟಲೆ ಮದ್ಯ ಹಾಗೂ ಹಣ್ಣಿನ ರಸಗಳನ್ನು ಬೆರೆಸಿ ಸಿದ್ಧಪಡಿಸುವ ಈ ಪ್ರಕ್ರಿಯೆ ನೋಡುಗರ ಗಮನ ಸೆಳೆಯಿತು. ಮಣಿಪಾಲದ ಪ್ರಸಿದ್ಧ ಕಂಟ್ರಿನ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಬಗೆಯ ಒಣಹಣ್ಣುಗಳಿಗೆ […]