ಉಡುಪಿ ಶಟಲ್ ಆಡುತ್ತಿರುವಾಗ ಕುಸಿದು ಬಿದ್ದು ಸಾವು !

ಉಡುಪಿ: ಕೋಟೆಬೀಡು ಬಳಿಯ ನಿವಾಸಿ ಪ್ರಶಾಂತ್ ಭೋಜ ಕುಂದರ್ (39) ಶಟಲ್ ಆಟ ಆಡುತ್ತಿರುವಾಗ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದು ಸಾವಿಗೀಡಾದ ಘಟನೆ ಸಂಭವಿಸಿದೆ. ಸಂಜೆ 5 ಗಂಟೆಯ ಸುಮಾರಿಗೆ ಶಟಲ್ ಆಡುವಾಗ ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಸ್ನೇಹಿತರು ಕೂಡಲೇ ಚಿಕಿತ್ಸೆಗೆ ಉಡುಪಿಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು, ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. 2 ತಿಂಗಳ ಹಿಂದೆ ಕೆಲಸ ಹುಡುಕಲು ದುಬೈಗೆ ಹೋಗಿದ್ದು ಅನಂತರ 10 ದಿನಗಳ ಹಿಂದೆ ಊರಿಗೆ ಹಿಂದಿರುಗಿದ್ದರು. ಸುಮಾರು […]
ತಂತ್ರಜ್ಞಾನವು ಸಮಾಜಕ್ಕೆ ಪೂರಕವಾಗಿರಬೇಕು: ಮಾಹೆ 34ನೇ ಘಟಿಕೋತ್ಸವದಲ್ಲಿಕೋಜಿ ತ್ಸುಬೋಟಾ ಅಭಿಮತ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 34ನೇ ಘಟಿಕೋತ್ಸವದ ಎರಡನೆಯ ದಿನದ ಸಮಾರಂಭದಲ್ಲಿ 44 ಪಿಎಚ್ಡಿ ಪದವೀಧರರು ಸೇರಿದಂತೆ ಒಟ್ಟು 1,416 ವಿದ್ಯಾರ್ಥಿಗಳಿಗೆ ಮಣಿಪಾಲದಲ್ಲಿ ಶುಕ್ರವಾರ ಪದವಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳ ಸಾಧನೆ, ಕನಸುಗಳ ಅನಾವರಣಕ್ಕೆ ಈ ಸಮಾರಂಭ ವೇದಿಕೆಯಾಯಿತು.ಹಿತಾಚಿ ಸಿಸ್ಟಮ್ಸ್ ಇಂಡಿಯಾದ ನಿರ್ದೇಶಕ ಹಾಗೂ ಚೀಫ್ ಟ್ರಾನ್ಸ್ಫಾರ್ಮೇಶನ್ ಆಫೀಸರ್(ಸಿಟಿಆರ್ಒ) ಕೋಜಿತ್ಸುಬೋಟಾ ಅವರು ಘಟಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಾಹೆ ಟ್ರಸ್ಟ್ನ ಟ್ರಸ್ಟಿ ಶ್ರೀಮತಿ ವಸಂತಿ ಆರ್.ಪೈ, […]
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 20ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು. ಕ್ರೀಡಾ ಜ್ಯೋತಿ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಲೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ ಮತ್ತು ಸಾಧನೆಯ ಮನೋಭಾವದೊಂದಿಗೆ ಮುನ್ನಡೆಯಬೇಕು. ಭವಿಷ್ಯದಲ್ಲಿ ಒಲಿಂಪಿಕ್ಸ್ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿ ಎಂದು […]