ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲು ಆಗ್ರಹ: ಬೆಂಗಳೂರಿನಿಂದ ಕಾರ್ಕಳಕ್ಕೆ ಬೃಹತ್ ವಾಹನ ರ‍್ಯಾಲಿ

ಉಡುಪಿ: ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಕಾರ್ಕಳದವರೆಗೆ ಬೃಹತ್ ವಾಹನ ರ‍್ಯಾಲಿ ನಡೆಯಿತು. ಬೆಂಗಳೂರಿನ ಪರಶುರಾಮ ಥೀಮ್ ಪಾರ್ಕ್ ಜನಾಗ್ರಹ ಸಮಿತಿಯ ನೇತೃತ್ವದಲ್ಲಿ ಬೆಳಗ್ಗೆ ಆರಂಭವಾದ ರ‍್ಯಾಲಿಯಲ್ಲಿ ಐನೂರಕ್ಕೂ ಅಧಿಕ ವಾಹನಗಳಲ್ಲಿ ಕಾರ್ಯಕರ್ತರು ಕಾರ್ಕಳಕ್ಕೆ ಆಗಮಿಸಿದರು. ಬಳಿಕ ನಡೆದ ಜನಾಗ್ರಹ ಸಭೆಯನ್ನುದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾರ್ಕಳದ ಹೆಮ್ಮೆಯ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ […]

ಸಾವಿರಾರು ಹಣತೆಗಳ ಬೆಳಕಿನಲ್ಲಿ ವೆಂಕಟರಮಣನ ವಿಶ್ವರೂಪ ದರ್ಶನ

ಉಡುಪಿ: ಉತ್ಥಾನ ದ್ವಾದಶಿ ಹಾಗೂ ತುಳಸಿ ಪೂಜೆಯ ಪರ್ವಕಾಲದ ಅಂಗವಾಗಿ ಉಡುಪಿಯ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ 5 ಗಂಟೆಗೆ ಸಾವಿರಾರು ಹಣತೆಗಳ ಜ್ಯೋತಿಯ ಬೆಳಕಿನಲ್ಲಿ ಶ್ರೀ ದೇವರ ವಿಶ್ವರೂಪ ದರ್ಶನ ನಡೆಯಿತು. ಪಶ್ಚಿಮ ಜಾಗರ ಪೂಜೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು, ಸರತಿ ಸಾಲಿನಲ್ಲಿ ನಿಂತು ಶ್ರೀ ದೇವರ ದರ್ಶನ ಪಡೆದರು. ದೇವಸ್ಥಾನದ ಸನ್ನಿಧಿಯಲ್ಲಿ ಸುಪ್ರಭಾತ, ಭಜನಾ ಕಾರ್ಯಕ್ರಮ, ದೀಪಾರಾಧನೆ, ಕಾಕಡ ಆರತಿ ಹಾಗೂ ಪ್ರಸಾದ ವಿತರಣೆ ನಡೆಯಿತು. ಶ್ರೀ ದೇವರ ಸನ್ನಿಧಿಯಲ್ಲಿ […]

ಅಜೆಕಾರು: ಮರಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ; ಚಾಲಕ ಸ್ಥಳದಲ್ಲೇ ಸಾವು, ಐವರು ಮಹಿಳೆಯರಿಗೆ ಗಾಯ

ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಅಂಡಾರು ಕೊಂದಲ್ಕೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಸೀತಾರಾಮ ರೈ (60) ಮೃತಪಟ್ಟಿದ್ದು, ವಾಹನದಲ್ಲಿದ್ದ ಮಹಿಳಾ ಕಾರ್ಮಿಕರಾದ ವಸಂತಿ, ಲೀಲಾವತಿ, ಶಾಲಿನಿ, ಶೋಭಾ ಮತ್ತು ಪ್ರೇಮ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಅವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಂಡಾರಿನಿಂದ […]