ಎಂಸಿಸಿ ಬ್ಯಾಂಕ್ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿಕೊಂಡಿದೆ. 16.11.2026ರಂದುಬೆಂಗಳೂರಿನಲ್ಲಿ ನಡೆದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂದರ್ಭದಲ್ಲಿ ಬ್ಯಾಂಕ್ಗೆ ಅತ್ಯುತ್ತಮ ಪಟ್ಟಣಸಹಕಾರ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರಿ ಸಹಕಾರ ಪಟ್ಟಣ ಬ್ಯಾಂಕುಗಳಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮೈಸೂರು ವಿಭಾಗದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ […]
ನರ್ಸಿಂಗ್ ವೃತ್ತಿಪರರಿಗೆ ಕೆಎಸ್ಎನ್ಸಿ ಆನ್ಲೈನ್ ಸೇವೆಗಳ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರು: ನ. 23: ಕರ್ನಾಟಕ ರಾಜ್ಯ ಶುಶ್ರೂಷಾ ಪರಿಷತ್ತು (ಕೆಎಸ್ಎನ್ಸಿ), ಬೆಂಗಳೂರು ವತಿಯಿಂದ ಮಂಗಳೂರು ವಿಭಾಗದ ಶುಶ್ರೂಷಾ ವೃತ್ತಿಪರರಿಗಾಗಿ ಆನ್ಲೈನ್ ಸೇವೆಗಳು ಹಾಗೂ ಇತರ ವೃತ್ತಿಪರ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವು ನಗರದ ಕೊಂಚಾಡಿಯ ಪಾಲೆಮಾರ್ ಕನ್ವೆನ್ಷನ್ ಸೆಂಟರ್ನಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 1,500 ಮಂದಿ ಶುಶ್ರೂಷಾ ವೃತ್ತಿಪರರು, ವಿದ್ಯಾರ್ಥಿಗಳು ಹಾಗೂ ಸಂಬಂಧಿತ ಕ್ಷೇತ್ರದವರು ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಶುಶ್ರೂಷಾ ವೃತ್ತಿಯು ಅತ್ಯಂತ ಪವಿತ್ರ ಹಾಗೂ […]
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕೊಡಿ ಎಂದು ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಹೊರಗಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದ್ದು, ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ […]
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆ: ದಾಖಲೆಗಳ ಬ್ಯಾಗ್ ಹಿಡಿದು ಎಸ್ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟಣ್ಣನವರ್

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್ನೊಂದಿಗೆ ಆಗಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಕಡತಗಳು ಮತ್ತು ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಅವರು ಕಚೇರಿಗೆ ಬಂದಿದ್ದಾರೆ. ಹಲವು ವರ್ಷಗಳಿಂದ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಟ್ಟಣ್ಣನವರ್, ತಮ್ಮಲ್ಲಿರುವ ಮಾಹಿತಿಯನ್ನು […]
ಗೇಮಿಂಗ್ ಲೋಕಕ್ಕೆ ಎಐ ಎಂಟ್ರಿ; ಯುಬಿಸಾಫ್ಟ್ ತರುತ್ತಿದೆ ಗೇಮಿಂಗ್ ಲೋಕವನ್ನೇ ಬದಲಿಸುವ ಎಐ

ವಿಡಿಯೋ ಗೇಮಿಂಗ್ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಜಾಗತಿಕ ಗೇಮಿಂಗ್ ಸಂಸ್ಥೆ ಯುಬಿಸಾಫ್ಟ್ (Ubisoft) ತನ್ನದೇ ಆದ ಜನರೇಟಿವ್ ಎಐ ತಂತ್ರಜ್ಞಾನ ಅಭಿವೃದ್ಧಿಪಡಿಸಲು ‘ಮದರ್ಬ್ರೈನ್’ (Motherbrain) ಎಂಬ ಪ್ರತ್ಯೇಕ ಅಂಗಸಂಸ್ಥೆ ಸ್ಥಾಪಿಸಿದೆ. ನವೆಂಬರ್ 19ರಂದು ಪ್ರಕಟವಾದ ಕಂಪನಿಯ 2026-27ನೇ ಆರ್ಥಿಕ ವರ್ಷದ ವರದಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಪರೀಕ್ಷಾರ್ಥವಾಗಿ ಪರಿಚಯಿಸಲಾಗಿದ್ದ ‘ಟೀಮ್ಮೇಟ್ಸ್’ ಎಐ ಯೋಜನೆಯ ತಂಡವೇ ಹೊಸ ಸಂಸ್ಥೆಯ ಮೂಲವಾಗಿದೆ. ಆಟಗಾರರಿಗೆ ಹೆಚ್ಚು ನೈಜ ಹಾಗೂ ಆಕರ್ಷಕ ಅನುಭವ ನೀಡುವುದು […]