ಬ್ರಹ್ಮಾವರದಲ್ಲಿ ನವೆಂಬರ್.27 ರಿಂದ ಉಡುಪಿ ಆಹಾರ ಮತ್ತು ಉದ್ಯಮ ಮೇಳ: ಇಲ್ಲಿದೆ ಕರಾವಳಿಯ ಸಂಸ್ಕೃತಿ ಮತ್ತು ಸೊಗಡಿನ ಬೃಹತ್ ಲೋಕ

ಬ್ರಹ್ಮಾವರ: ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘದ ದಶಮಾನೋತ್ಸವದ ಅಂಗವಾಗಿ ನವೆಂಬರ್ 27ರಿಂದ 29ರವರೆಗೆ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಉಡುಪಿ ಆಹಾರ ಮತ್ತು ಉದ್ಯಮ ಮೇಳ ನಡೆಯಲಿದೆ. ಮೂರು ದಿನಗಳ ಕಾಲ ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ನಡೆಯುವ ಮೇಳದಲ್ಲಿ ಆಹಾರೋದ್ಯಮ, ಗೃಹೋಪಯೋಗಿ ವಸ್ತುಗಳು, ಕೃಷಿ ಉತ್ಪನ್ನಗಳು, ಸ್ಥಳೀಯ ಉತ್ಪನ್ನಗಳು ಹಾಗೂ ಕರಾವಳಿಯ ಕಲೆ-ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ಉದ್ಯಮಿಗಳು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವುದು ಹಾಗೂ ಸ್ಥಳೀಯ […]
ಜೆಸ್ರಿಲ್ ಗ್ಲೋಬಲ್ ಸರ್ವೀಸಸ್ನಲ್ಲಿದೆ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಬ್ರಹ್ಮಾವರ: ಜೆಸ್ರಿಲ್ ಗ್ಲೋಬಲ್ ಸರ್ವೀಸಸ್ ಎಲ್ಎಲ್ಪಿ ಸಂಸ್ಥೆಯಲ್ಲಿ ಆಮದು ಮತ್ತು ರಫ್ತು ವಿಭಾಗದ ಡಾಕ್ಯುಮೆಂಟೇಶನ್ ಹಾಗೂ ಗ್ರಾಹಕ ಸೇವಾ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶಿಪ್ಪಿಂಗ್, ಲಾಜಿಸ್ಟಿಕ್ಸ್, ಫ್ರೈಟ್ ಫಾರ್ವರ್ಡಿಂಗ್, ಸಪ್ಲೈ ಚೈನ್ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ 0ರಿಂದ 5 ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ದುಬೈನಲ್ಲಿ ಸಂಬಂಧಿತ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು ಹಾಗೂ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ನಲ್ಲಿ ಡಿಪ್ಲೊಮಾ ಪಡೆದ ಹೊಸ […]
ಮಣಿಪಾಲ–ಪೆರಂಪಳ್ಳಿ ರಸ್ತೆಯಲ್ಲಿ ಟಿಪ್ಪರ್–ಕಾರಿನ ನಡುವೆ ಅಪಘಾತ

ಉಡುಪಿ: ಮಣಿಪಾಲ–ಪೆರಂಪಳ್ಳಿ ರಸ್ತೆಯಲ್ಲಿ ಕೆಂಪು ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಟಿಪ್ಪರ್ ರಸ್ತೆ ವಿಭಜಕದ ಮೇಲೆ ಏರಿದೆ. ಕಾರು ಜಖಂಗೊಂಡಿದೆ. ಅಪಘಾತದ ವೇಳೆ ಟಿಪ್ಪರ್ನಲ್ಲಿದ್ದ ಕೆಂಪು ಕಲ್ಲುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ರಸ್ತೆಯ ಮೇಲಿದ್ದ ಕಲ್ಲುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ವತಿಯಿಂದ ಉಮಾಶ್ರೀ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಲಾಯಿತು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಮೊದಲಾದವರು ಉಪಸ್ಥಿತರಿದ್ದರು.
ಉದ್ಯೋಗವಕಾಶ

ಪ್ರಸಿದ್ಧ ಟಿಮೋರ ಪ್ರಿ ಸ್ಕೂಲ್ ಒಂದಕ್ಕೆ ಟೀಚರ್ ಸ್ಟಾಫ್ ಬೇಕಾಗಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9591982777