ರಾಜ್ಯದ ಎಲ್ಲಾ ಶಾಲೆ ,ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 6ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕವಾಗಿ ಕರಗುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿನಿಯರ ಋತುಚಕ್ರದ ಆರೋಗ್ಯ ಮತ್ತು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದ್ದು, ಈ ಸಂಬಂಧ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆ ಹೊರಡಿಸಿದೆ. ಶಾಲೆಗಳಲ್ಲಿ ವೆಂಡಿಂಗ್ ಯಂತ್ರ ಅಳವಡಿಕೆಗೆ ಸೂಚನೆ ಸುಪ್ರೀಂ ಕೋರ್ಟ್ […]

ಮಂಗಳೂರಿನಲ್ಲಿ ತಡರಾತ್ರಿಯವರೆಗೆ ವ್ಯಾಪಾರಕ್ಕೆ ಅವಕಾಶ: ಪೊಲೀಸ್ ಆಯುಕ್ತರಿಂದ ಹೊಸ ಆದೇಶ

ಮಂಗಳೂರು: ಕರಾವಳಿಯ ಪ್ರಮುಖ ವಾಣಿಜ್ಯ ನಗರಿ ಮಂಗಳೂರಿನ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ನಗರ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದೆ. ನಗರದಲ್ಲಿ ರಾತ್ರಿ ವ್ಯಾಪಾರ ವಹಿವಾಟು ನಡೆಸುವ ಸಂಬಂಧ ಈ ಹಿಂದೆ ಜಾರಿಯಲ್ಲಿದ್ದ ಸಮಯದ ನಿರ್ಬಂಧವನ್ನು ಸಡಿಲಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ರಾತ್ರಿ 11.45ರವರೆಗೆ ಅಂಗಡಿ, ಹೋಟೆಲ್ ತೆರೆಯಲು ಅವಕಾಶ ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ರಾತ್ರಿ 10 ಅಥವಾ 10.30ರ ವೇಳೆಗೆ ವ್ಯಾಪಾರ ಚಟುವಟಿಕೆಗಳನ್ನು […]

ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಬಿಜೆಪಿಯೇ ಹೊಣೆ: ರಿಜ್ವಾನ್ ಅರ್ಷದ್

ಉಡುಪಿ: ಪರಶುರಾಮ ಥೀಮ್ ಪಾರ್ಕ್ ನಿರ್ಮಾಣವಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ನೀಡಿದ್ದು, ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ್ದು ಕೂಡ ಬಿಜೆಪಿಯವರೇ. ಆದರೆ ಈಗ ವಿವಾದ ಸೃಷ್ಟಿಸಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್‌ ಅನ್ನು ದೂಷಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ಉಡುಪಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಕಾಂಗ್ರೆಸ್ ಕೂಡ […]

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ‘ದೃಷ್ಟಿ’ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆಗೆ ಸಿದ್ಧತೆ

ಉಡುಪಿ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನಿರ್ಮಿಸಲಾಗಿರುವ ‘ದೃಷ್ಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್’ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಹೊಸ ಬಲ ನೀಡಲಿದೆ. ಜಿಲ್ಲೆಯ ಸಂಚಾರ ವ್ಯವಸ್ಥೆಯ ಮೇಲ್ವಿಚಾರಣೆ, ಸಂಚಾರ ನಿಯಮ ಉಲ್ಲಂಘನೆ ಪತ್ತೆ, ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕೇಂದ್ರ ಮಹತ್ವದ ಪಾತ್ರ ವಹಿಸಲಿದೆ.ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಪೊಲೀಸ್ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]

ಉಡುಪಿ: ನಾಪತ್ತೆಯಾಗಿದ್ದ ವೃದ್ಧೆಯ ಮೃತದೇಹ ಬಾವಿಯಲ್ಲಿ ಪತ್ತೆ

ಉಡುಪಿ: ಪಡುಅಲೆವೂರಿನ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಮೃತದೇಹ ಮಂಗಳವಾರ ಮನೆಯ ಸಮೀಪದ ಖಾಸಗಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಶಾಂತ ಶೆಟ್ಟಿಗಾರ್ತಿ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿರುವ ಬಗ್ಗೆ ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ನಾಗೇಶ್ ನೇತೃತ್ವದ ತಂಡ ಅಗತ್ಯ ಸುರಕ್ಷತಾ ಪರಿಕರಗಳನ್ನು ಬಳಸಿ ಬಾವಿಯ ಆಳದಲ್ಲಿದ್ದ ಮೃತದೇಹವನ್ನು […]