ಸಿಎಂ ವಿಡಿಯೋ ಮಾತುಕತೆಗೂ ನಿಲ್ಲದ ಮುಷ್ಕರ – 9ನೇ ದಿನಕ್ಕೆ ಕಾಲಿಟ್ಟ `ಆಶಾ’ ಹೋರಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಫ್ರೀಡಂಪಾರ್ಕ್ (Freedom Park) ಆಶಾ ಕಾರ್ಯಕರ್ತೆಯರ ಆಕ್ರೋಶದ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನ ಚಳಿ, ಗಾಳಿ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರಿಗೆ ಮಳೆಯೂ ಅಡ್ಡಿಯಾಯಿತು. ಆದ್ರೆ ಮಳೆ ಬಂದರೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಅಂತಾ ಪಟ್ಟು ಹಿಡಿದು ಹೋರಾಟ ಮುಂದುವರಿಸಿದ್ದಾರೆ. ಒಂದೆಡೆ ಜೋರು ಮಳೆ, ಇಳೆಯಲ್ಲಾ ನೀರಾದ್ರೂ ಜಗ್ಗದ ಗುಲಾಬಿ ಸೇನೆ. ವರುಣನಿಗೆ ಸೆಡ್ಡು ಹೊಡೆದು ನಿಂತ ಆಶಾ ಕಾರ್ಯಕರ್ತೆಯರು. ಚಳಿ, ಬಿಸಿಲಿಗೆ ನಲುಗದ ನಾವು ಮಳೆಗೆ […]
ಇಸ್ರೇಲ್ನಲ್ಲಿ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು: ಕೊಲೆ ಶಂಕೆ, ತನಿಖೆಗೆ ಕುಟುಂಬಸ್ಥರ ಆಗ್ರಹ

ಮಂಗಳೂರು: ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ. ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವೆಲ್ (41) ಮೃತಪಟ್ಟವರು. ಒಂದೂವರೆ ವರ್ಷದಿಂದ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದ ಅವರು, ಆರಂಭದಲ್ಲಿ ಟೆಲ್ ಅವೀವ್ನ ಇಸ್ರೇಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ನಝರೆತ್ ಸಮೀಪದ ನೊಫ್ ಹಗಲಿಲ್ನಲ್ಲಿರುವ ಯುಸಿಟಿ […]
ಮಣಿಪಾಲ: ಮಧುಮೇಹದ ಗಾಯಗಳ ನಿರ್ವಹಣೆಗೆ ಮುನಿಯಾಲ್ ಆಯುರ್ವೇದದಿಂದ ಉಚಿತ ಆರೋಗ್ಯ ಶಿಬಿರ

ಮಣಿಪಾಲ: ಮಧುಮೇಹ ಜಾಗೃತಿ ಮಾಸದ ಅಂಗವಾಗಿ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಶಲ್ಯತಂತ್ರ ಹಾಗೂ ಸ್ವಸ್ಥವೃತ್ತ ವಿಭಾಗಗಳ ವತಿಯಿಂದ ನವೆಂಬರ್ 23ರಿಂದ 28ರವರೆಗೆ ಮಧುಮೇಹದ ಗಾಯಗಳ ನಿರ್ವಹಣೆಗಾಗಿ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶಿಬಿರ ನಡೆಯುತ್ತಿದೆ. ಶಿಬಿರವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಬಿ. ಸತ್ಯನಾರಾಯಣ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ, ಶಲ್ಯತಂತ್ರ ವಿಭಾಗದ […]
ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಎಸ್ಎಂಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಬ್ರಹ್ಮಾವರ: ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಫ್ರೀಸ್ಟೈಲ್ ಕುಸ್ತಿ ಪಂದ್ಯಾವಳಿಯಲ್ಲಿ ಬ್ರಹ್ಮಾವರದ ಎಸ್ಎಂಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಅನನ್ಯಾ ಆರ್. ಹೆಗ್ಡೆ ಅವರು 68 ಕೆ.ಜಿ. ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಶರಣ್ ಅವರು 97 ಕೆ.ಜಿ. ವಿಭಾಗದಲ್ಲಿ ಹಾಗೂ ಸುಕನ್ಯಾ ಅವರು 76 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಲ್ಲದೆ, ಕಾಲೇಜಿನ ಶ್ರೀ ಸಾಯಿ ಸುಮುಖ, ಮಂದಾರ, ಮೆರಿಲ್ ಪ್ರಿಯಾ ಡಯಾಸ್, […]