ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಶುರು, ಇಂದಿನಿಂದ ಶುಲ್ಕ ವಸೂಲಿ;ಸವಾರರಿಗೆ ಹೊರೆ

ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್–ಅಡ್ಡಹೊಳೆ ಚತುಷ್ಪಥ ರಸ್ತೆಯ ವಳಾಲು–ನೀರಕಟ್ಟೆ ಬಳಿ ನಿರ್ಮಿಸಲಾಗಿರುವ ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭವಾಗಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಈ ಟೋಲ್ನಿಂದಾಗಿ ಅಡ್ಡಹೊಳೆ, ಹಾಸನ ಹಾಗೂ ಬೆಂಗಳೂರು ಕಡೆಗೆ ಸಂಚರಿಸುವ ವಾಹನ ಸವಾರರಿಗೆ ಹೆಚ್ಚುವರಿ ಶುಲ್ಕದ ಹೊರೆ ಬೀಳಲಿದೆ. NHAI ನಿಗದಿಪಡಿಸಿರುವ ದರದಂತೆ ಕಾರು, ವ್ಯಾನ್ಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ವಿಧಿಸಲಾಗುತ್ತದೆ. ಲಘು ವಾಣಿಜ್ಯ […]
ಉದ್ಯೋಗಾವಕಾಶ

ಉಡುಪಿಯ ಪರಶುಭೂಮಿ ಚಿಟ್ಸ್ PVT LTD ನಲ್ಲಿ Accounts Assistant, Office Assistant ಹುದ್ದೆಗೆ ಉದ್ಯೋಗಾವಕಾಶ ನಡೆಯುತ್ತಿದೆ ಆಸಕ್ತರು ಕೂಡಲೇ ಸಂಪರ್ಕಿಸಿ: 9986776755/9844898370.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ: ಸಚಿವ ಖಾದರ್ ಬೇಜವಾಬ್ದಾರಿ ಹೇಳಿಕೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಸುಗಮವಾಗಿ ಕಾರ್ಯನಿರ್ವಹಿಸಬಲ್ಲದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಕುರಿತು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದ ರಾಜ್ಯದ ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಹೇಳಿದ ಖಾದರ್, “10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇದರಿಂದ ಆರೋಗ್ಯ ಇಲಾಖೆ ಯಾವುದೇ […]
ಶಿರ್ವ: ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಪ್ರಕರಣ; ಆರೋಪಿ ಸೆರೆ

ಉಡುಪಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಪಡುಬೆಳ್ಳೆ ನಿವಾಸಿ ಮುರಳಿಕೃಷ್ಣ ಉಪಾಧ್ಯಾಯ (47) ಬಂಧಿತ ಆರೋಪಿ. ಈತ ನ.24ರಂದು ರಾತ್ರಿ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದ ರಾಜಮೂರ್ತಿ ಭಟ್(68) ಎಂಬವರನ್ನು ಮಾತನಾಡಲು ಇದೆ ಎಂದು ಹೇಳಿ, ದೇವಳದ ಹೊರಗೆ ಕರೆದುಕೊಂಡು ಹೋಗಿದ್ದನು. ಬಳಿಕ ಆತನ ಕಾರಿನಲ್ಲಿ ಕುಳ್ಳಿರಿಸಿ ಭತ್ತದ ಬೇಸಾಯ 200 ಎಕರೆಗೆ ವಿಸ್ತರಿಸಲು 25 ಲಕ್ಷ ರೂ. ಹಣದ ಅವಶ್ಯಕತೆ ಇದ್ದು, ಸಹಾಯ […]
ಉಡುಪಿ: 10 ಬಾಂಗ್ಲಾ ಅಕ್ರಮ ವಲಸಿಗರು ಗಡಿಪಾರು!

ಉಡುಪಿ: ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಂಡಿದ್ದು, ಇದೀಗ ಅವರನ್ನು ಭಾರತದಿಂದ ಗಡಿಪಾರು ಮಾಡುವ ಪ್ರಕ್ರಿಯೆಗೆ ಪೊಲೀಸ್ ಇಲಾಖೆ ಮುಂದಾಗಿದೆ. 2024ರ ಅಕ್ಟೋಬರ್ 11ರಂದು ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು […]