ತ್ರಿಶಾ ವಿದ್ಯಾ ಕಾಲೇಜಿನ ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭ

ಕಟಪಾಡಿ: ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಹವ್ಯಾಸಗಳಲ್ಲೂ ತೊಡಗಿಸಿಕೊಳ್ಳಬೇಕು.ಇದರಿಂದ ಪ್ರತಿಭೆ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ ಎಂದು ಪಡುಬಿದ್ರೆಯ ಸಾಗರ್ ವಿದ್ಯಾ ಮಂದಿರದಮುಖ್ಯೋಪಾಧ್ಯಾಯಿನಿ ಪದ್ಮಶ್ರೀ ಸುರೇಶ್ ರಾವ್ ಹೇಳಿದರು.ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು ನ.26ರಂದು ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶೇಷ ಪ್ರತಿಭೆ ಅಡಗಿರುತ್ತದೆ; ಅದನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಕರೆ […]