ದಕ್ಷಿಣ ಕನ್ನಡದಲ್ಲಿ ಇಂದು 218 ಮಂದಿ ಕೊರೊನಾದಿಂದ ಗುಣಮುಖ; ಮೂವರು ಕೊರೊನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 218 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 8127 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಇಂದು 247 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10778ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2332 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಮೂವರು ಕೊರೊನಾಗೆ ಬಲಿ
ಜಿಲ್ಲೆಯಲ್ಲಿ ಇಂದು ಮೂವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.