ಉಡುಪಿ: ಜಿಲ್ಲೆಯಲ್ಲಿ ಇಂದು 219 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 41 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 178 ಮಂದಿ ಸಹಿತ 219 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 8603 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ 172 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11259ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2561 ಸಕ್ರಿಯ ಕೊರೊನಾ ಸೋಂಕಿತರಿದ್ದು, 1186 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1375 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.