ಉಡುಪಿಯಲ್ಲಿ ಇಂದು 246 ಮಂದಿ ಕೊರೊನಾದಿಂದ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ ಇಂದು 246 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 99 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 147 ಮಂದಿ ಸಹಿತ 246 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7983 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 251 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10704ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇನ್ನೂ 2629 ಸಕ್ರಿಯ ಕೊರೊನಾ ಸೋಂಕಿತರಿದ್ದು, 1059 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1570 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೊರೊನಾಗೆ ಒಬ್ಬರು ಬಲಿ
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 49 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.