ಫೆ. 24ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮ ಶೀಲತೆ ಮತ್ತು
ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲೆ ಮತ್ತು ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.), ಕೋಟ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ
ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ “ಭರವಸೆ” ಕಾರ್ಯಕ್ರಮವು ಫೆಬ್ರವರಿ 24 ರಂದು ಬೆಳಗ್ಗೆ 9 ಗಂಟೆಯಿಂದ ಕೋಟ ವಿವೇಕ ಪದವಿ ಪೂರ್ವ
ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ
ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಉದ್ಘಾಟಿಸಲಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ
ವಹಿಸಲಿದ್ದಾರೆ.