ಉಡುಪಿಯಲ್ಲಿ ಇಂದು 250 ಮಂದಿ ಕೊರೊನಾದಿಂದ ಗುಣಮುಖ: ಮೂವರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 250 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 185 ಮಂದಿ ಸಹಿತ 250 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 9601 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 167 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11924ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇನ್ನೂ 2221 ಸಕ್ರಿಯ ಕೊರೊನಾ ಸೋಂಕಿತರಿದ್ದು, 1090 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1131 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

*ಮೂವರು ಕೊರೊನಾಗೆ ಬಲಿ*
ಜಿಲ್ಲೆಯಲ್ಲಿ ಇಂದು ಮೂರು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 70 ವರ್ಷದ ವೃದ್ಧ, 85 ವರ್ಷದ ವೃದ್ಧ ಹಾಗೂ 55 ವರ್ಷದ ವ್ಯಕ್ತಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.