ಬೆಂಗಳೂರಿನ ಕೆಂಗೇರಿಯಲ್ಲಿ ಬಸ್ ಅಫಘಾತ: 29 ಪ್ರಯಾಣಿಕರು ಗಾಯಾಳು

ಬೆಂಗಳೂರು: ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿ 29 ಜನರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬೆಂಗಳೂರಿನ ಡಿಸಿಪಿ ಡಾ ಸಂಜೀವ್ ಪಾಟೀಲ್ ಸುದ್ದಿ ಸಂಸ್ಥೆ ಎ ಎನ್ ಐ ಗೆ ತಿಳಿಸಿದ್ದಾರೆ.

ಪ್ರಯಾಣಿಕರಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದರೆ, ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದು ಮಡಿಕೇರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು.