ಉಡುಪಿ: ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಷನ್, ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ದಿ ಸಂಘ ಗಂಗಾವತಿ, ಕೇಂದ್ರ ಕಛೇರಿ ವಿಜಯಪುರ, ಆಲ್ ಇಂಡಿಯಾ ಟೆಂಟ್ ಎಂಡ್ ಡೆಕೋರೇಷನ್ ವೆಲ್ ಫೇರ್ ಅಸೋಷಿಯನ್ ನವದೆಹಲಿ ಹಾಗೂ ಧ್ವನಿ, ಬೆಳಕು ಸಂಯೋಜಕರ ಸಂಘಟನೆ ಉಡುಪಿ ಇದರ ಉಡುಪಿ ಜಿಲ್ಲಾ ದಶಮಾನೋತ್ಸವ ಪ್ರಯುಕ್ತ ಉಡುಪಿ ವೈಭವದ 2ನೇ ರಾಜ್ಯಮಟ್ಟದ ಅಧಿವೇಶನ ಆದಿತ್ಯವಾರ ಉಡುಪಿ ಬೀಡಿನಗುಡ್ಡೆ ಬಯಲು ರಂಗಮಂಟಪದಲ್ಲಿ ಜರಗಿತು.
ಧ್ವನಿ ಮತ್ತು ಬೆಳಕಿನ ವಸ್ತು ಪ್ರದರ್ಶನ ಮಾರಾಟ ಮಳಿಗೆಯ ಉದ್ಘಾಟನೆಯನ್ನು ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್ ಉದ್ಘಾಟಸಿ ಮಾತನಾಡಿ, ನೂತನ ವಿನ್ಯಾಸ ವಸ್ತು ಸಂಗ್ರಹ ಕಂಡು ಸಂತಸ ವ್ಯಕ್ತಪಡಿಸಿದರು. ಆಧುನಿಕ ಜೀವನ ಶೈಲಿಯ ಅದ್ದೂರಿ ಸಭೆ -ಸಮಾರಂಭ ಯಶ್ವಸಿಯಾಗಲು ಇವರ ಪಾತ್ರ ಮಹತ್ವದ್ದಾಗಿದೆ ಎಂದರು.
ಅಧಿವೇಶನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಉಡುಪಿ ಆಹಾರಕ್ಕೆ ಹಾಗೂ ವಿಹಾರಕ್ಕೆ ತುಂಬಾ ಜನಪ್ರಿಯತೆ ಹೊಂದಿದೆ. ಎಲ್ಲಾ ಸಭೆ-ಸಮಾರಂಭ ದಲ್ಲಿ ತೆರೆ ಮರೆಯಲ್ಲಿ ಕೆಲಸ ಮಾಡುವ ಇವರು ಸುಂದರ ವೇದಿಕೆಗೆ ಸರಿಯಾದ ಧ್ವನಿ-ಬೆಳಕಿನ ವ್ಯವಸ್ಥೆ ರೂಪಿಸಿ ಜನ ಮನ್ನಣೆ ಗಳಿಸಿರುತ್ತಾರೆ ಎಂದರು. ಈ ಸಂಘಟನೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.
ಸಂಘಟನೆಯ ಸಂಸ್ಥಾಪಕ ಮಹಬೂಬ ಮುಲ್ಲಾ ಸಿದ್ದಾಪುರ ಪ್ರಸ್ತಾವಿಕವಾಗಿ ಮಾತನಾಡಿದರು.
ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಶಿವರಾಜ್ ಮಲ್ಲಾರ್, ಅಲ್ ಇಂಡಿಯಾ ಟೆಂಟ್ ಎಂಡ್ ಡೆಕೋರೇಷನ್ ವೆಲ್ ಫೇರ್ ಅಸೋಷಿಯನ್ ನವದೆಹಲಿ ಇದರ ಅಧ್ಯಕ್ಷ ರವಿ ಜಿಂದಾಲ್, ಪ್ರಧಾನ ಕಾರ್ಯದರ್ಶಿ ಅನಿಲ್ ರಾವ್, ರಾಜ್ಯ ಅಧ್ಯಕ್ಷ ಶಿವ ಕುಮಾರ್ ಹಿರೇಮಠ , ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಗಿರೀಶ್ ಅಂಚನ್, ಜಿಲ್ಲಾಧ್ಯಕ್ಷ ರಾಮಕೃಷ್ಣ ಕುಂದರ್, ಪ್ರಧಾನ ಕಾರ್ಯದರ್ಶಿ ದಾಮೋದರ್ , ಜಿಲ್ಲಾ ಶಾಮಿಯಾನ ಅಧ್ಯಕ್ಷ ಉದಯಕುಮಾರ್, ರಾಜ್ಯ ಸಮಿತಿ ಸದಸ್ಯರು, ವಿವಿಧ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.