ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: 7 ಮಂದಿ ಗೈರು

ಉಡುಪಿ, ಜೂನ್ 14: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 27 ಮಂದಿ ಪರೀಕ್ಷೆ ಬರೆದಿದ್ದು, 7 ಮಂದಿ ಗೈರಾಗಿದ್ದಾರೆ.
ಎಲೆಕ್ಟ್ರಾನಿಕ್ಸ್ ಪರೀಕ್ಷೆಗೆ ನೊಂದಾಯಿಸಿದ್ದ 4 ಮಂದಿ ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬರು ಗೈರು ಹಾಜರಾಗಿದ್ದಾರೆ. ಕಂಪ್ಯೂಟರ್ ಸೈನ್ಸ್ ಪರೀಕ್ಷೆಗೆ 30 ಮಂದಿ ಹೆಸರು ನೊಂದಾಯಿಸಿದ್ದು, 24 ಮಂದಿ ಪರೀಕ್ಷೆ ಬರೆದಿದ್ದು, 6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.