ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ ಉಡುಪಿ ಪ್ರಥಮ, ದ.ಕ. ದ್ವಿತೀಯ

ಬೆಂಗಳೂರು, ಏ.15: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ಇಲಾಖೆಯ ನಿರ್ದೇಶಕಿ ಸಿ.ಶಿಖಾ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಮಾ.1ರಿಂದ 18ರ ವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು  ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಮತ್ತು ಏ.16ರಂದು ಕಾಲೇಜುಗಳಲ್ಲಿ ಪ್ರಕಟಪಡಿಸಲಾಗುತ್ತದೆ.
ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ. ಒಟ್ಟು 61.73 % ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಸೋಮವಾರ 12 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಇಲಾಖೆ ವೆಬ್‌ಸೈಟ್‌ pue.kar.nic.in/ www. karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.