ಕೊರೊನಾ ಸೋಂಕಿಗೆ ಭಾರತದಲ್ಲಿ ಮೂರನೇ ಬಲಿ: ಮುಂಬೈನಲ್ಲಿ ವೃದ್ಧ ಸಾವು

ಮುಂಬೈ: ಭಾರತದ ಮುಂಬೈನಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದ್ದು, ಮಹಾರಾಷ್ಟ್ರದ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ.

ದುಬೈನಿಂದ ಬಂದಿದ್ದ ಕಲಬುರಗಿಯ 76 ವರ್ಷದ ವೃದ್ಧ ಮೊದಲು ಕೊರೋನಾಗೆ ಬಲಿಯಾಗಿದ್ದು, ನಂತರ ದೆಹಲಿಯಲ್ಲಿ ಮಹಿಳೆಯೊಬ್ಬರು ಈ ಮಾರಕ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದರು. ಇದೀಗ ಮಹಾರಾಷ್ಟ್ರದಲ್ಲೂ ವೃದ್ಧನೊಬ್ಬ ಕೊರೋನಾ ಸೋಂಕಿಗೆ ಬಲಿಯಾಗುವ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3ಕ್ಕೇರಿದೆ.

ಈ ಸೋಂಕಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಜನ ಸಾಮಾನ್ಯರು ಕೂಡಾ ಇವುಗಳನ್ನು ಪಾಳಿಸಿ ಈ ಸೋಂಕು ನಿಯಂತ್ರಿಸುವಲ್ಲಿ ಸಹಕರಿಸಬೇಕಿದೆ.

ಜಗತ್ತಿನಾದ್ಯಂತ ಸುಮಾರು 1.7 ಲಕ್ಷ ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.  7174 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್ ಗೆ ಈವರೆಗೆ 127 ಮಂದಿಗೆ ಸೋಂಕು ಇರುವುದು ದೃಡಪಟ್ಟಿದ್ದು, 13 ಮಂದಿ ಗುಣಮುಖರಾಗಿದ್ದಾರೆ.