udupixpress
Home Trending ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆ.ಜಿ. ಗಾಂಜಾ ವಶ: ಇಬ್ಬರು ಪೆಡ್ಲರ್ ಗಳ ಬಂಧನ

ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆ.ಜಿ. ಗಾಂಜಾ ವಶ: ಇಬ್ಬರು ಪೆಡ್ಲರ್ ಗಳ ಬಂಧನ

ಚಿಕ್ಕಬಳ್ಳಾಪುರ: ಇಲ್ಲಿನ ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಟೆ ಎಂಬಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿ ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಇಂಡಿಕಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದು, ಆಗ ಕಾರಿನಲ್ಲಿ ಗಾಂಜಾ ಪತ್ತೆಯಾಗಿದೆ. ಪೆಡ್ಲರ್ ಗಳಾದ ಆಂಧ್ರಪ್ರದೇಶದ ಚಿತ್ತೂರು ಮೂಲದ ಶಂಕರ್ ಹಾಗೂ ಶಿಡ್ಲಘಟ್ಟ ಮೂಲದ ಶಭಾಜ್‍ನನ್ನು ಪೊಲೀಸರು ಬಂಧಿಸಿದ್ದಾರೆ.

error: Content is protected !!